ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಅನ್ಯಾಯ, ಡಿಕೆಶಿ ಒಕ್ಕಲಿಗರ ನಾಯಕರಲ್ಲ: ಆರ್‌. ಅಶೋಕ

Published 11 ಏಪ್ರಿಲ್ 2024, 23:30 IST
Last Updated 11 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಕೋಲಾರ: ಕಾಂಗ್ರೆಸ್‌ನಿಂದಲೇ ಒಕ್ಕಲಿಗರಿಗೆ ಹೆಚ್ಚು ಅನ್ಯಾಯವಾಗಿದೆ. ಹಾಗಾಗಿ ಒಕ್ಕಲಿಗರ ಮತ ಕೇಳುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹರಿಹಾಯ್ದಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿ.ಕೆ. ಶಿವಕುಮಾರ್‌ ಒಕ್ಕಲಿಗ ಸಮುದಾಯದ ಮುಖಂಡ ಅಲ್ಲ. ಕುಕ್ಕರ್ ಬಾಂಬರ್‌ನನ್ನು ಬ್ರದರ್ ಎಂದಿರುವ ಶಿವಕುಮಾರ್‌, ನಮ್ಮನ್ನು ಬ್ರದರ್ ಎನ್ನುವ ನೈತಿಕತೆ ಕಳೆದುಕೊಂಡಿದ್ದಾರೆ’ ಎಂದರು.   

ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಉರುಳಿಸಿದ್ದು ಬಿಜೆಪಿಯವರು ಎಂದು ಶಿವಕುಮಾರ್‌ ಹೇಳಿದ್ದಾರೆ. ಕುಮಾರಸ್ವಾಮಿ ಸರ್ಕಾರ ಉರುಳಿಸಿದ್ದು ಮತ್ತು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದು ಕಾಂಗ್ರೆಸ್ಸಿನವರೇ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.

‘ಎಲ್ಲ ಸಮುದಾಯವನ್ನು ಪ್ರೀತಿ ಮಾಡುವ ಮಠ ಆದಿಚುಂಚನಗಿರಿ. ಮಠಕ್ಕೆ ನಾವು ಭೇಟಿ ನೀಡಿದ್ದನ್ನು ಸಹಿಸದೆ, ಹೊಟ್ಟೆ ಉರಿಗೆ ಏನೇನೋ ಹೇಳುತ್ತಿರುವ ಶಿವಕುಮಾರ್‌ ಅವರಿಗೆ ಬುದ್ಧಿ ಭ್ರಮಣೆಯಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT