ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಯಲ್ಲಿ ಲೀಡ್ ಬರದಿದ್ದರೆ ಸಚಿವ ಸ್ಥಾನಕ್ಕೆ ಕುತ್ತು: ಶರಣಬಸಪ್ಪ ದರ್ಶನಾಪುರ

Published 22 ಏಪ್ರಿಲ್ 2024, 7:52 IST
Last Updated 22 ಏಪ್ರಿಲ್ 2024, 7:52 IST
ಅಕ್ಷರ ಗಾತ್ರ

ಶಹಾಪುರ: ‌‘ಕ್ಷೇತ್ರದ ಪ್ರತಿಯೊಂದು ಸಮಸ್ಯೆ ಹಾಗೂ ಸವಾಲುಗಳಿಗೆ ನಿರಂತರವಾಗಿ ಶ್ರಮಿಸುತ್ತಿವೆ. ಕರೆ ಮಾಡಿದರೂ ಸ್ಪಂದಿಸಿ ಗ್ರಾಮದ ಸಮಸ್ಯೆ ಬಗೆಹರಿಸುವ ಯತ್ನ ಮಾಡಿರುವೆ. ನಮ್ಮ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಲೀಡ್ ಕೊಟ್ಟರೆ ಸಚಿವ ಸ್ಥಾನ ಉಳಿಯುತ್ತದೆ, ಇಲ್ಲದಿದ್ದರೆ ಕುತ್ತು ಬರಲಿದೆ. ನನ್ನ ಸ್ಥಾನ ಉಳಿಸುವುದು ಬಿಡುವುದು ನಿಮ್ಮ ಕೈಯಲ್ಲಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ತಾಲ್ಲೂಕಿನ ಕೊಂಗಂಡಿ ಗ್ರಾಮದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಪರ ಮತಯಾಚಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಮುಖಂಡ ಮರಿಗೌಡ ಹುಲಕಲ್, ಶರಣಪ್ಪ ಸಲಾದಪುರ, ನೀಲಕಂಠ ಬಡಿಗೇರ, ಹೇಮರಡ್ಡಿ ಸೂಗೂರಾಳ, ತಿಮ್ಮಾರಡ್ಡಿ, ಸುಭಾಷ ಗುತ್ತೆದಾರ, ರಂಗಣ್ಣ ದೊರೆ, ಹಣಮಂತರಾಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT