ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾಯಿಸಲಿ, ಕಣದಿಂದ ಹಿಂದಕ್ಕೆ ಸರಿಯುವೆ:ಈಶ್ವರಪ್ಪ

Published 2 ಏಪ್ರಿಲ್ 2024, 10:16 IST
Last Updated 2 ಏಪ್ರಿಲ್ 2024, 10:16 IST
ಅಕ್ಷರ ಗಾತ್ರ

ಶಿವಮೊಗ್ಗ: 'ಕೇಂದ್ರ ಗೃಹ ಸಚಿವ ಅಮಿತ್ ಶಾ ನನಗೆ ಕರೆ ಮಾಡಿ ದೆಹಲಿಗೆ ಬುಧವಾರ ಬರುವಂತೆ ಸೂಚಿಸಿದ್ದಾರೆ. ನಾನೂ ಹೋಗುತ್ತಿದ್ದೇನೆ' ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.‌ ಈಶ್ವರಪ್ಪ ತಿಳಿಸಿದರು‌.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಅಮಿತ್ ಶಾ ಕರೆ ಮಾಡಿದ್ದರು. ‌ಹಿರಿಯ ನಾಯಕರು ಕರೆದಾಗ ಹೋಗಬೇಕಾಗುತ್ತದೆ ತಿಳಿಸಿದರು.

ಚುನಾವಣೆಗೆ ಸ್ಪರ್ಧೆ ಮಾಡುವುದು ಬೇಡ ಎಂದು ಅಮಿತ್ ಶಾ ನನಗೆ ಸಲಹೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿ ನಾಳೆಯೇ ಕಣದಿಂದ ಹಿಂದಕ್ಕೆ ಸರಿಯುವೆ ಎಂದು ಅವರಿಗೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದರು.

ದೆಹಲಿಗೆ ಬಂದಾಗ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಸೂಚಿಸುವಂತಿಲ್ಲ ಎಂದು ಅಮಿತ್ ಶಾ ಅವರಿಗೆ ಹೇಳಿದ್ದೇನೆ.

ಚುನಾವಣೆಯಿಂದ ಹಿಂದಕ್ಕೆ ಸರಿಯುವುಂತೆ ಹೇಳಿದ್ದಾರೆ. ನೀವು ಸ್ಪರ್ಧೆ ಮಾಡುವುದು ಆಶ್ಚರ್ಯ ತಂದಿದೆ ಎಂದರು. ಅದಕ್ಕೆ ನಾನು ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಅದನ್ನು ಮುಕ್ತಿಗೊಳಿಸಬೇಕು. ರಾಜ್ಯ ಬಿಜೆಪಿಯಲ್ಲಿ ಕಾಂಗ್ರೆಸ್​ ಸಂಸ್ಕೃತಿ ಬೆಳೆಯುತ್ತಿದೆ. ಅಪ್ಪ-ಮಕ್ಕಳ ಕೈಯಲ್ಲಿ ಪಕ್ಷ ಹೋಗಿರುವುದು ತುಂಬಾ ಅನ್ಯಾಯ. ಇದರಿಂದ ಕಾರ್ಯಕರ್ತರಿಗೆ ನೋವಾಗಿದೆ. ಅಪ್ಪ ಮಕ್ಕಳ ವಿರುದ್ಧ ಒಂದು ಪಕ್ಷದ ವ್ಯವಸ್ಥೆಯನ್ನು ಮುಕ್ತಿಗೊಳಿಸಬೇಕು ಎಂದು ಅವರಿಗೆ ತಿಳಿಸಿದ್ದೇನೆ ಎಂದರು.

ಹಿಂದುತ್ವದ ಪರವಾಗಿ ಹೋರಾಟ ಮಾಡುತ್ತಿರುವುದು ತಪ್ಪು ಎಂಬ ಕಲ್ಪನೆ ಮೂಡಿದೆ. ಹಿಂದುತ್ವಕ್ಕೆ ಸರಿಯಾದ ಬೆಲೆ ಸಿಗಬೇಕು ಎಂಬ ಉದ್ದೇಶವಿದೆ. ಹಿಂದುಳಿದವರಿಗೆ ಟಿಕೆಟ್​ ಕೊಡುವುದಕ್ಕೆ ಆಗುತ್ತಿಲ್ಲ. ಹಿಂದುಳಿದವರಿಗೆ ಏಕೆ ಮೋಸ ಮಾಡುತ್ತಿದ್ದೀರಿ ಎಂಬುದನ್ನು ಅಮಿತ್​ ಶಾ ಅವರ ಗಮಕ್ಕೆ ತಂದಿದ್ದೇನೆ ಎಂದು ತಿಳಿಸಿದರು.

ಹಿಂದುಳಿದವರ, ದಲಿತರ ಬಗ್ಗೆ ಮತ್ತು ಪಕ್ಷದಲ್ಲಿ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂಬ ಉದ್ದೇಶದಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಶಾ ಅವರಿಗೆ ಹೇಳಿದ್ದೇನೆ ಎಂದರು.

ಪುತ್ರ ಕೆ.ಈ.ಕಾಂತೇಶನ ರಾಜಕೀಯ ಭವಿಷ್ಯದ ಬಗ್ಗೆಯೂ ಅಮಿತ್ ಪ್ರಸ್ತಾಪಿಸಿದರು. ಮಗನ ಜೊತೆ ಮಾತನಾಡಿಯೇ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವುದಾಗಿ ಹೇಳಿದರು.

ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದ್ರೆ ನಾನು ಚುನಾವಣೆಗೆ ನಿಲ್ಲುವುದಿಲ್ಲ. ನಾನು ದೆಹಲಿಗೆ ದೊಡ್ಡವರು ಕರೆದಾಗ ಹೋಗದೆ ಇರುವುದಕ್ಕೆ ಆಗೋದಿಲ್ಲ. ನನಗೆ ನೊಂದ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ ಎಂದರು.

ಯಡಿಯೂರಪ್ಪ ಮತ್ತು ಅವರ ಮಕ್ಕಳು ಈ ಸಮಸ್ಯೆ ಇಲ್ಲೇ ಬಗೆಹರಿಯುತ್ತದೆ ಅಂದುಕೊಂಡಿದ್ದರು. ಅದು ಆಗದ ಕಾರಣ ಅಮಿತ್ ಶಾ ಈಗ ಫೋನ್ ಮಾಡಿದ್ದಾರೆ. ಯಡಿಯೂರಪ್ಪ ನಮ್ಮ ಮನೆಗೆ ಬರುತ್ತೇನೆ ಎಂದು ಹೇಳಿದ್ದರು. ಇನ್ನೂ ಬಂದಿಲ್ಲ ಎಂದು ಈಶ್ವರಪ್ಪ ತಿಳಿಸಿದರು.ಕೆ.ಎಸ್.‌ ಈಶ್ವರಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT