ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಯ ಮೇಲೆ ‘ಗ್ಯಾರಂಟಿ’ ಪ್ರಭಾವ ಬೀರಲಿವೆ: ಸಚಿವ ಮಧು ಬಂಗಾರಪ್ಪ

Published 5 ಏಪ್ರಿಲ್ 2024, 14:05 IST
Last Updated 5 ಏಪ್ರಿಲ್ 2024, 14:05 IST
ಅಕ್ಷರ ಗಾತ್ರ

ಭದ್ರಾವತಿ: ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಗ್ಗೆ ಮತದಾರರಲ್ಲಿ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಮೇಲೆ ಪ್ರಭಾವ ಬೀರಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ನಮ್ಮದು ರಾಜಕೀಯ ಕುಟುಂಬ. ಜಿಲ್ಲೆಯ ಮತದಾರರ ನಾಡಿಮಿಡಿತ ಏನೆಂದು ತಿಳಿದುಕೊಂಡಿದ್ದೇವೆ. ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡುವವರು ನಾವಲ್ಲ. ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿದೆ’ ಎಂದರು.

‘ನಾವು ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಅರಿವಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರ ಮನೆಗಳಿಗೂ ತಲುಪಿವೆ ಎಂಬ ವಿಶ್ವಾಸವಿದೆ. ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ’ ಎಂದರು.

ಶಾಸಕ ಬಿ.ಕೆ.ಸಂಗಮೇಶ್ವರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್. ಕುಮಾರ್, ಎಚ್.ಎಲ್ ಷಡಕ್ಷರಿ, ಎಸ್. ಮಣಿಶೇಖರ್, ಬಿ.ಕೆ ಮೋಹನ್, ಲತಾ ಚಂದ್ರಶೇಖರ್, ಕಾಂತರಾಜ್, ಎಂ ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT