ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತೀವ್ರ ನಿಗಾ ವಹಿಸಲಿದ್ದು, ಎಲ್ಲ 2,829 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಭದ್ರತೆಗಾಗಿ ಅರೆ ಸೇನಾಪಡೆಗಳ ಏಳು ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸ್ಥಳೀಯ ಚುನಾವಣಾಧಿಕಾರಿಗಳು ಮತ್ತು ವೀಕ್ಷಕರ ಕೋರಿಕೆ, ವರದಿ ಆಧರಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಅರೆ ಸೇನಾಪಡೆ ತುಕಡಿಗಳ ನಿಯೋಜನೆ ಎರಡು ಪಟ್ಟು ಇರಲಿದೆ' ಎಂದರು.

ಅರೆ ಸೇನಾಪಡೆ ನಿಯೋಜನೆಗೆ ಕೆಲವು ರಾಜಕೀಯ ಪಕ್ಷಗಳು ಮನವಿ ಮಾಡಿದ್ದವು. ಚುನಾವಣಾಧಿಕಾರಿಯೂ ವರದಿಯಲ್ಲಿ ಈ ಕುರಿತು ಮನವಿ ಮಾಡಿದ್ದರು. ಈ ಎಲ್ಲವನ್ನೂ ಆಧರಿಸಿ ವೆಬ್ ಕಾಸ್ಟಿಂಗ್ ಮತ್ತು ಭದ್ರತೆ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಎಲ್ಲ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು ಎಂದರು.

ಮತಗಟ್ಟೆಯಲ್ಲಿನ ಪ್ರತಿ ಸೆಕೆಂಡ್ ಅವಧಿಯ ಬೆಳವಣಿಗೆಯು ವೆಬ್ ಕಾಸ್ಟಿಂಗ್‌ನಲ್ಲಿ ಲಭ್ಯವಾಗಲಿದೆ. ಕ್ಷೇತ್ರದ ಚುನಾವಣಾ ಅಧಿಕಾರಿ, ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮತ್ತು ಕೇಂದ್ರ ಚುನಾವಣಾ ಆಯೋಗವು ವೆಬ್ ಕಾಸ್ಟಿಂಗ್ ವೀಕ್ಷಿಸಲು ಅವಕಾಶ ಇದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.