ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಶಿವಮೊಗ್ಗದಲ್ಲಿ ದಾಖಲೆಗಳಿಲ್ಲದ ₹1.10 ಕೋಟಿ ಮೌಲ್ಯದ ಸೀರೆ ವಶ

-
Published 22 ಮಾರ್ಚ್ 2024, 16:13 IST
Last Updated 22 ಮಾರ್ಚ್ 2024, 16:13 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಕೆ.ಆರ್.ಪುರಂ ಬಡಾವಣೆಯ ಖಾಸಗಿ ಉಗ್ರಾಣದ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು, ಅಲ್ಲಿ ದಾಖಲೆಗಳಿಲ್ಲದೆ ಸಂಗ್ರಹಿಸಿ ಇಟ್ಟಿದ್ದ ₹ 1.10 ಕೋಟಿ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಅಧಿಕಾರಿಗಳ ತಂಡ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದೆ. ಉಗ್ರಾಣ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಸೇರಿದೆ ಎಂದು ತಿಳಿದುಬಂದಿದೆ.

‘ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ತಂದಿರಿಸಲಾಗಿತ್ತೇ ಎಂಬುದು ಇನ್ನೂ ಖಚಿತಪಟ್ಟಿಲ್ಲ. ಸೂಕ್ತ ದಾಖಲೆಗಳು ಲಭ್ಯವಾಗದ ಕಾರಣ ಸೀರೆಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಸುಪರ್ದಿಗೆ ವಹಿಸಲಾಗಿದೆ. ಪರಿಶೀಲನೆ ನಡೆದಿದೆ’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT