ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ‘ಕೈ’ ಟಿಕೆಟ್‌ಗಾಗಿ ವೀಣಾ ಕಣ್ಣೀರು

Published 20 ಮಾರ್ಚ್ 2024, 15:35 IST
Last Updated 20 ಮಾರ್ಚ್ 2024, 15:35 IST
ಅಕ್ಷರ ಗಾತ್ರ

ನವದೆಹಲಿ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ವೀಣಾ ಕಾಶಪ್ಪನವರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬುಧವಾರ ಭೇಟಿ ಮಾಡಿ ಲಾಬಿ ನಡೆಸಿದರು. ಟಿಕೆಟ್‌ ಕೈತಪ್ಪುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅವರು ಕಣ್ಣೀರು ಹಾಕಿದರು. 

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಯಾರೂ ಮುಂದೆ ಬಂದಿರಲಿಲ್ಲ. ಕಷ್ಟದ ಸಮಯದಲ್ಲಿ ನಾನು ಸ್ಪರ್ಧೆ ಮಾಡಿದ್ದೇನೆ. ಸೋಲು ಗೆಲುವು ಲೆಕ್ಕಿಸದೆ ಸ್ಪರ್ಧೆಯೊಡ್ಡಿದ್ದೆ. ಜಿಲ್ಲೆಯಲ್ಲಿ ಕಳೆದ ಬಾರಿ ನಮ್ಮ ಪಕ್ಷದ ಶಾಸಕರು ಇರಲಿಲ್ಲ. ಈಗ ಐದು ಮಂದಿ ಶಾಸಕರು ಇದ್ದಾರೆ. ಆದರೆ, ನನಗೆ ಅವಕಾಶ ನೀಡಲು ನಿರಾಕರಿಸುತ್ತಿದ್ದಾರೆ’ ಎಂದರು. 

‘ಟಿಕೆಟ್‌ ಆಕಾಂಕ್ಷಿಯಾಗಿರುವ ಸಂಯುಕ್ತಾ ಪಾಟೀಲ ಯಾರು ಎಂಬುದು ಕ್ಷೇತ್ರದವರಿಗೆ ಗೊತ್ತಿಲ್ಲ. ಪಕ್ಷಕ್ಕಾಗಿ ದುಡಿದವರನ್ನು ಪರಿಗಣಿಸುತ್ತಿಲ್ಲ. ಪಟ್ಟಿ ಬಿಡುಗಡೆಯಾಗುವ ತನಕ ಕಾಯುತ್ತೇನೆ. ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ’ ಎಂದು ಅವರು ಹೇಳಿದರು. 

ವೀಣಾ ಅವರ ಪತಿ, ಶಾಸಕ ವಿಜಯಾನಂದ ಕಾಶಪ್ಪನವರ, ‘ವೀಣಾ ಅವರು ಸಂಕಷ್ಟದ ಸಮಯದಲ್ಲಿ ಕಣಕ್ಕೆ ಇಳಿದಿದ್ದರು. ಈ ಸಲವೂ ಅವರಿಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಕಾರ್ಯಕರ್ತರ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT