ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

14 ಕ್ಷೇತ್ರ–ಶೇ 69.56ರಷ್ಟು ಮತದಾನ; ಯಾವ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು...?

ಪರಿಷ್ಕೃತ ಅಂಕಿಅಂಶ ಪ್ರಕಟಿಸಿದ ಚುನಾವಣಾ ಆಯೋಗ
Published 27 ಏಪ್ರಿಲ್ 2024, 15:54 IST
Last Updated 27 ಏಪ್ರಿಲ್ 2024, 15:54 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮತದಾನ ಪೂರ್ಣಗೊಂಡಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ ಶೇಕಡ 69.56ರಷ್ಟು ಮತದಾರರು ಹಕ್ಕು ಚಲಾಯಿಸಿದ್ದಾರೆ.

ಶುಕ್ರವಾರ ಮತದಾನ ಪೂರ್ಣಗೊಂಡ ಬಳಿಕ ತಾತ್ಕಾಲಿಕ ಅಂಕಿಅಂಶ ಹಂಚಿಕೊಂಡಿದ್ದ ಕೇಂದ್ರ ಚುನಾವಣಾ ಆಯೋಗ, ಶೇ 69.23ರಷ್ಟು ಮತದಾನ ನಡೆದಿದೆ ಎಂದು ಹೇಳಿತ್ತು. ಶನಿವಾರ ಅಂತಿಮ ಪಟ್ಟಿ ಪ್ರಕಟಿಸಿದ್ದು, ಶೇ 69.56ರಷ್ಟು ಮತದಾನ ನಡೆದಿದೆ ಎಂದು ತಿಳಿಸಿದೆ.

14 ಕ್ಷೇತ್ರಗಳಲ್ಲಿ ಒಟ್ಟು 2.88 ಕೋಟಿ ಮತದಾರರು ಮತದಾನಕ್ಕೆ ಅರ್ಹತೆ ಹೊಂದಿದ್ದರು. ಅವರಲ್ಲಿ 2 ಕೋಟಿ ಮತದಾರರು ಮಾತ್ರ ಹಕ್ಕು ಚಲಾಯಿಸಿದ್ದಾರೆ. ಚುನಾವಣಾ ಆಯೋಗ ನೀಡಿರುವ ಅಂಕಿಅಂಶಗಳ ಪ್ರಕಾರ, 87,69,748 ಮತದಾರರು ಮತದಾನದಿಂದ ದೂರ ಉಳಿದಿದ್ದಾರೆ.

1.44 ಕೋಟಿ ಪುರುಷ ಮತದಾರರ ಪೈಕಿ 1 ಕೋಟಿ ಮಂದಿ ಮತ ಚಲಾಯಿಸಿದ್ದಾರೆ. 1.43 ಮಹಿಳೆಯರ ಪೈಕಿ 1 ಕೋಟಿ ಮಂದಿ ಮತ ಚಲಾಯಿಸಿದ್ದಾರೆ. 3,067 ಲಿಂಗತ್ವ ಅಲ್ಪಸಂಖ್ಯಾತ ಮತದಾರರಲ್ಲಿ ಮತದಾನ ಮಾಡಿದವರು 667 ಮಂದಿ ಮಾತ್ರ.

2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಶೇ 3.32ರಷ್ಟು ಹೆಚ್ಚಿನ ಮತದಾನ ನಡೆದಿದೆ. ಬಿಬಿಎಂಪಿ ವ್ಯಾಪ್ತಿಯ ಮೂರೂ ಕ್ಷೇತ್ರಗಳಲ್ಲಿ ಮತದಾನ ಪ್ರಮಾಣ ಕುಸಿದಿದೆ. ಬೆಂಗಳೂರು ಉತ್ತರದಲ್ಲಿ ಶೇ 0.31ರಷ್ಟು, ಬೆಂಗಳೂರು ಕೇಂದ್ರದಲ್ಲಿ ಶೇ 0.26ರಷ್ಟು ಮತ್ತು ಬೆಂಗಳೂರು ದಕ್ಷಿಣದಲ್ಲಿ ಶೇ 0.53ರಷ್ಟು ಕಡಿಮೆ ಮತದಾನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT