ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Poll: BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಅನಂತಕುಮಾರ ಹೆಗಡೆಗೆ ತಪ್ಪಿದ ಟಿಕೆಟ್

Published 24 ಮಾರ್ಚ್ 2024, 15:58 IST
Last Updated 24 ಮಾರ್ಚ್ 2024, 15:58 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ.

ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ನಾಯಕರು ಪಟ್ಟಿ ಬಿಡುಗಡೆ ಮಾಡಿದರು.

ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಕೆ. ಸುಧಾಕರ್‌, ಉತ್ತರಕನ್ನಡದಿಂದ ವಿಶ್ವೇಶ್ವರ ಹೆಗಡೆ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್‌ ನೀಡಲಾಗಿದೆ.

ಉತ್ತರಕನ್ನಡದಿಂದ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಈ ಸಲ ಟಿಕೆಟ್‌ ನೀಡಿಲ್ಲ. ಕಗ್ಗಂಟಾಗಿರುವ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರು ಇನ್ನೂ ಅಂತಿಮಗೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT