ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls 2024 | ಕೋಲಾರ ಟಿಕೆಟ್‌: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಭೆ

Published 28 ಮಾರ್ಚ್ 2024, 11:19 IST
Last Updated 28 ಮಾರ್ಚ್ 2024, 11:19 IST
ಅಕ್ಷರ ಗಾತ್ರ

ಬೆಂಗಳೂರು: ಕೋಲಾರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಕುರಿತ ಗೊಂದಲ ಪರಿಹರಿಸಲು ಆ ಜಿಲ್ಲೆಯ ಪಕ್ಷದ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿಯ ನಿವಾಸ ಕಾವೇರಿಯಲ್ಲಿ ನಡೆಯುತ್ತಿರವ ಸಭೆಯಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌, ಸಚಿವ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್‌, ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್  ಇದ್ದಾರೆ.

ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್‌ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಮಾಜಿ ಸಭಾಧ್ಯಕ್ಷ ರಮೇಶ್‌ಕುಮಾರ್‌ ಬಣ, ಈ ಕ್ಷೇತ್ರದಲ್ಲಿ ಬಲಗೈ ಸಮುದಾಯವರಿಗೇ ಟಿಕೆಟ್‌ ನೀಡಬೇಕು ಎಂದು ಪಟ್ಟು ಹಿಡಿದಿದೆ.

ಮುನಿಯಪ್ಪ ಕುಟುಂಬಕ್ಕೆ ಟಿಕೆಟ್‌ ನೀಡುವುದನ್ನು ವಿರೋಧಿಸಿ ಸಚಿವ ಎಂ.ಸಿ. ಸುಧಾಕರ್‌ ಸೇರಿ ಮೂವರು ಶಾಸಕರು ಮತ್ತು ಇಬ್ಬರು ಪರಿಷತ್‌ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವುದರಿಂದ ಕೋಲಾರದಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ.

ಮುನಿಯಪ್ಪ ಕುಟುಂಬವರನ್ನು ಹೊರತುಪಡಿಸಿ, ಬಲಗೈ ಸಮುದಾಯದ ಯಾರಿಗೆ ಟಿಕೆಟ್‌ ನೀಡಿದರೂ ನಮ್ಮ ವಿರೋಧ ಇಲ್ಲ ಎಂದು ರಮೇಶ್‌ ಕುಮಾರ್ ಬಣ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT