ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಬೆಳಗಾವಿ: ದಾಖಲೆಗಳಿಲ್ಲದ ₹7.98 ಲಕ್ಷ ವಶ

Published 29 ಮಾರ್ಚ್ 2024, 9:01 IST
Last Updated 29 ಮಾರ್ಚ್ 2024, 9:01 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ, ದಾಖಲೆಗಳಿಲ್ಲದ ₹7.98 ಲಕ್ಷ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರ ತಂಡ ವಶಕ್ಕೆ ಪಡೆದಿದೆ.

ನಗರದ ನಿವಾಸಿ ಸಂಜಯ ಬಸವರಾಜ ರೆಡ್ಡಿ ಎನ್ನುವವರು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಹಣ ಇಟ್ಟುಕೊಂಡಿದ್ದರು. ಬಸ್‌ ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುವ ವೇಳೆ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಹಣ ಮುಟ್ಟುಗೋಲು ಹಾಕಿಕೊಂಡು ಖಾನಾಪುರದ ಉಪ ಖಜಾನೆಯಲ್ಲಿ ಇರಿಸಲಾಗಿದೆ ಎಂದು ಖಾನಾಪುರ ಸಹಾಯಕ ಚುನಾವಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT