ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೋದಿ ಒಳ್ಳೆಯ ನಾಟಕಕಾರ’ ಎಂದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

Published 4 ಮೇ 2024, 15:32 IST
Last Updated 4 ಮೇ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ‘ಮೋದಿ ಒಳ್ಳೆಯ ನಾಟಕಕಾರ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಮುಖಂಡರು ಶನಿವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು.

ಮುಖ್ಯಮಂತ್ರಿ ತಮ್ಮ ಹೇಳಿಕೆ ಮೂಲಕ ಕಲಾವಿದರಿಗೆ ಅವಮಾನ ಮಾಡಿದ್ದಾರೆ. ದೇಶದ ಉನ್ನತ ಸ್ಥಾನದ ವ್ಯಕ್ತಿಗಳನ್ನು ಕುರಿತು ಇಂತಹ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಗಣೇಶ್‌ ರಾವ್‌ ಕೇಸರ್ಕರ್‌, ರಾಜ್ಯ ಸಹ-ಸಂಚಾಲಕ ವಿಕ್ರಂ ಸೂರಿ, ಹಿರಿಯ ಮುಖಂಡರಾದ ದತ್ತಗುರು ಹೆಗ್ಡೆ, ರಂಗಕರ್ಮಿಗಳಾದ ಪ್ರಸನ್ನ ಕುಮಾರ್‌, ಪುನೀತ್‌, ರಂಗಭೂಮಿ ಕಲಾವಿದರಾದ ರಜನಿಕಾಂತ್‌, ಗೀತಾ, ರಂಗಕರ್ಮಿ ಅಜಿತ್ ಬಸಾಪುರ್‌, ರಂಗಭೂಮಿ ನಟ ಅಭಿಷೇಕ್ ಕೊಡಿಯಲ್‌ ನಿಯೋಗದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT