ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಫಲಿತಾಂಶ ತಡೆ ಹಿಡಿಯಲು ಈಶ್ವರಪ್ಪ ಒತ್ತಾಯ

Published 14 ಮೇ 2024, 15:34 IST
Last Updated 14 ಮೇ 2024, 15:34 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ತಮ್ಮ ವಿರುದ್ಧ ಅಪ ಪ್ರಚಾರ ನಡೆಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಫಲಿತಾಂಶ ತಡೆ ಹಿಡಿಯಬೇಕು ಎಂದು ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಮತದಾನಕ್ಕೆ ಒಂದೆರಡು ದಿನ ಇರುವಾಗಲೇ ನಾನು ಕಣದಿಂದ ಹಿಂದಕ್ಕೆ ಸರಿದು, ರಾಘವೇಂದ್ರ ಅವರಿಗೆ ಮತ ಚಲಾಯಿಸಿ ಎಂದು ಮನವಿ ಮಾಡುವ ನಕಲಿ ವಿಡಿಯೊ ಹರಿ ಬಿಡಲಾಯಿತು. ಇದನ್ನು ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗವೇ ಹರಿಬಿಟ್ಟಿದ್ದು, ಇದು ಮತದಾರರಲ್ಲಿ ಗೊಂದಲವನ್ನು ಸೃಷ್ಟಿ ಮಾಡಿತು. ಇದರ ಹಿಂದೆ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರ ಕೈವಾಡವಿದೆ’ ಎಂದು ಹೇಳಿದರು.

‘2019ರ ಚುನಾವಣೆಯಲ್ಲಿ ಮಾಡಿದ್ದ ಪ್ರಚಾರ ಭಾಷಣವನ್ನು ಈಗ ಮಾಡಿರುವಂತೆ ತಿರುಚಿ ವಿಡಿಯೊ ಬಿಡುಗಡೆ ಮಾಡಿದರು. ಚುನಾವಣೆಯಲ್ಲಿ ಸೋಲುವ ಭಯದಿಂದ ಈ ಕೆಲಸ ಮಾಡಿದ್ದಾರೆ. ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯ ಮಾದರಿಯ ತುಣುಕೊಂದನ್ನು ಅವರು ಹರಿಬಿಟ್ಟಿದ್ದರು. ಹಿಂದುತ್ವ ಪ್ರತಿಪಾದಿಸಿದ ಈಶ್ವರಪ್ಪ ತಮ್ಮನ್ನು ಬೆಂಬಲಿಸಿದ್ದಾರೆ ಎಂಬುದಾಗಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದರು. ನಾನು ಕಣದಿಂದ ಸರಿದಿರುವುದಾಗಿ ಎಲ್ಲೂ ಹೇಳಿಲ್ಲ ಮತ್ತು ಮಾಧ್ಯಮಗಳಿಗೆ ಹೇಳಿಕೆಯನ್ನೂ ನೀಡಿರಲಿಲ್ಲ. ಇದು ಷಡ್ಯಂತ್ರ’ ಎಂದು ತಿಳಿಸಿದರು.

‘ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆಯಲ್ಲೂ ದೂರು ದಾಖಲಿಸಿದ್ದೇನೆ. ಇದರ ತನಿಖೆ ಪೂರ್ಣಗೊಳ್ಳುವವರೆಗೆ ಫಲಿತಾಂಶವನ್ನು ತಡೆ ಹಿಡಿಯಬೇಕು’ ಎಂದು ಈಶ್ವರಪ್ಪ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT