ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಮಗ ಸತ್ತಾಗ ಮೋದಿ ಸಹಾಯಕ್ಕೆ ಬಂದರು ಎಂಬುದು ಶುದ್ಧ ಸುಳ್ಳು: CM ಸಿದ್ದರಾಮಯ್ಯ

Published 30 ಏಪ್ರಿಲ್ 2024, 15:29 IST
Last Updated 30 ಏಪ್ರಿಲ್ 2024, 15:29 IST
ಅಕ್ಷರ ಗಾತ್ರ

‘ನನ್ನ ಮಗ ಸತ್ತಾಗ ನನಗೆ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರು ಬಹಳ ಸಹಾಯ ಮಾಡಿದ್ದಾರೆ ಎನ್ನುವುದು ಶುದ್ಧ ಸುಳ್ಳು. ಆಗ ನಾನು ಇವರನ್ನು ಸಂಪರ್ಕಿಸಿಯೇ ಇಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. 'ಸಿದ್ದರಾಮಯ್ಯ ಅವರ ಮಗ ಸತ್ತಾಗ ಮೋದಿ ಅವರು ಮಾಡಿದ ಸಹಾಯವನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಕನಿಷ್ಠ ಸೌಜನ್ಯ ಕೂಡ ಉಳಿಸಿಕೊಂಡಿಲ್ಲ' ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಮಾತಿಗೆ ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, 'ನನ್ನ ಮಗ ವಿದೇಶದಲ್ಲಿ ಸತ್ತ. ಮೃತದೇಹ ಇಲ್ಲಿಗೆ ತರಿಸಿ ಅಂತ್ಯಕ್ರಿಯೆ ಮಾಡಿದ್ದೇನೆ ಅಷ್ಟೆ. ಆ ಸಂಸರ್ಭದಲ್ಲಿ ಸಹಾಯಕ್ಕಾಗಿ ಮೋದಿ ಅವರನ್ನಾಗಲಿ, ಬೇರೆ ಯಾರನ್ನೇ ಆಗಲಿ ಸಂಪರ್ಕಿಸುವ ಪ್ರಮೇಯವೇ ಬಂದಿಲ್ಲ. ಇವರೆಲ್ಲ ಸುಳ್ಳು ಹೇಳುತ್ತಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT