ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls: ಇಂದು ರಾಜ್ಯಕ್ಕೆ ಪ್ರಧಾನಿ ಆಗಮನ: ಎಲ್ಲಿ? ಯಾವಾಗ ಮೋದಿ ಕಾರ್ಯಕ್ರಮ?

Published 20 ಏಪ್ರಿಲ್ 2024, 4:35 IST
Last Updated 20 ಏಪ್ರಿಲ್ 2024, 4:35 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳು, ಚಿಕ್ಕಬಳ್ಳಾ ಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಚಾರ ನಡೆಸಲಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಮೋದಿ ಚಿಕ್ಕಬಳ್ಳಾಪುರದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಗಳೂರಿಗೆ ಬರಲಿದ್ದಾರೆ. ಇಲ್ಲಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ಅವರ 3 ಗಂಟೆ ಸುಮಾರಿ ಸಾರ್ವಜನಿಕ ಸಭೆ ಉದ್ದೇಶಿ ಮಾತನಾಡಲಿದ್ದಾರೆ.

ಸಂಜೆ ಮತ್ತೆ ಬೆಂಗಳೂರಿಗೆ ವಾಪಸ್‌ ಬರಲಿರುವ ಮೋದಿ ಅವರು 5 ಗಂಟೆಗೆ ಅರಮನೆ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.  ಬೆಂಗಳೂರು ಕೇಂದ್ರ, ದಕ್ಷಿಣ, ಉತ್ತರ ಹಾಗೂ ಗ್ರಾಮಾಂತರ ಲೋಕಸಭೆ ಕ್ಷೇತ್ರಗಳಲ್ಲಿನ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. 

ಭಾನುವಾರ ಕೂಡ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.

ರಾಜ್ಯದಲ್ಲಿ ಇದೇ 26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಅವರು ಮೈಸೂರಿನಲ್ಲಿ ಸಾರ್ವಜನಿಕ ಸಭೆ ಮತ್ತು ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT