ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್‌ವೊಂದರ ಆವರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ ಕೈ ಕೈ ಮಿಲಾಯಿಸಿದರು.

ಹೋಟೆಲ್‌ನಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತಿತ್ತು. ‘ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶಕ್ಕೆ ವಾಪಸ್ ಕರೆತರಬೇಕು’ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೋರ್ ಕಮಿಟಿ ಸಭೆ, ಸುದ್ದಿಗೋಷ್ಠಿ ಮುಗಿಸಿಕೊಂಡು ಹೊರ ಬಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮತ್ತು ಪ್ರತಿಭಟನಾನಿರತರು ಮುಖಾಮುಖಿಯಾದರು. ಆಗ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ‘ಗೋ ಬ್ಯಾಕ್ ಕುಮಾರಸ್ವಾಮಿ’ ಎಂದು ಕಾಂಗ್ರೆಸ್‌ನವರು ಘೋಷಣೆ ಕೂಗಿದರೆ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊನೆಗೆ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು, ವಾಹನದಲ್ಲಿ ಕರೆದೊಯ್ದರು.

ಘಟನೆ ಹಿನ್ನೆಲೆಯಲ್ಲಿ ಹೋಟೆಲ್ ಆವರಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
.ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು.ಪ್ರಜ್ವಲ್ ರೇವಣ್ಣ ಗೆಲ್ಲಿಸಿದ್ದು ಯಾರು?: ಆರ್.ಅಶೋಕ.19 ಶಾಸಕರ ಭವಿಷ್ಯನಾ? ಪ್ರಜ್ವಲ್, ರೇವಣ್ಣನಾ?- ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನೆ.ಪ್ರಜ್ವಲ್ ಪ್ರಕರಣದ ಬಗ್ಗೆ ಬಿಜೆಪಿಯವರು ಮೌನ ಯಾಕೆ: ಪ್ರಿಯಾಂಕ ಖರ್ಗೆ ಪ್ರಶ್ನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.