ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls: 1,409 ಮತಗಟ್ಟೆಗಳಲ್ಲಿ ಮತದಾರರ ಸೇವಾ ಕೇಂದ್ರ

Published 16 ಏಪ್ರಿಲ್ 2024, 15:53 IST
Last Updated 16 ಏಪ್ರಿಲ್ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ಒಂದೇ ಪ್ರದೇಶದಲ್ಲಿ ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಸ್ಥಳದಲ್ಲಿ ಮತದಾರರ ಸೇವಾ ಕೇಂದ್ರ ಮತ್ತು ಮತಗಟ್ಟೆಯ ಮಾಹಿತಿಯಿರುವ ನಿರ್ದೇಶನ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಸೂಚಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 1,409 ಕಡೆ ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿವೆ. ಈ ಪ್ರದೇಶಗಳಲ್ಲಿ ಮತದಾರರ ಸೇವಾ ಕೇಂದ್ರ ಸ್ಥಾಪಿಸಬೇಕು. ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸಿ, ಎಷ್ಟು ವಾಹನ ನಿಲ್ಲಿಸಬಹುದು ಎಂಬ ಮಾಹಿತಿ ಹಾಕಬೇಕು. ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನಿಯೋಜಿಸಬೇಕು ಎಂದು ಹೇಳಿದರು.

ಮಾದರಿ ಮತಗಟ್ಟೆ: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಸಾಮಾನ್ಯ ಮತಗಟ್ಟೆಗಳ ಜೊತೆಗೆ ಸಖಿ(ಪಿಂಕ್), ಯುವ, ಥೀಮ್ ಆಧಾರಿತ, ಅಂಗವಿಕಲರ ಮಾದರಿ ಮತಗಟ್ಟೆಗಳನ್ನು ಅನುಷ್ಠಾನಗೊಳಿಸಲು ಸೂಚಿಸಿದರು.

ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿಗಳ ವ್ಯವಸ್ಥೆ, ಮೆಡಿಕಲ್ ಕಿಟ್ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಇರಬೇಕು. ‘ಹೆಲ್ಪ್ ಡೆಸ್ಕ್’ಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕೆಂದು ಎಂದು ತುಷಾರ್‌ ಗಿರಿನಾಥ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT