ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರಿಗೆ ಉಡುಗೊರೆ ಮೂಲಕ ಆಮೀಷ: HDD ಆರೋಪ– ತಕ್ಷಣ ಕ್ರಮಕ್ಕೆ EC ನಿರ್ದೇಶನ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ
Published 26 ಮಾರ್ಚ್ 2024, 14:13 IST
Last Updated 26 ಮಾರ್ಚ್ 2024, 14:13 IST
ಅಕ್ಷರ ಗಾತ್ರ

ನವದೆಹಲಿ: ’ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್ ಅವರು ಮತದಾರರಿಗೆ ಉಚಿತ ಕೊಡುಗೆಗಳನ್ನು ನೀಡಲು ಯೋಜನೆ ರೂಪಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸಲ್ಲಿಸಿದ ದೂರಿನ ಕುರಿತು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯವರಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. 

ಈ ಸಂಬಂಧ ಮುಖ್ಯ ಚುನಾವಣಾಧಿಕಾರಿಯವರಿಗೆ ಮಾರ್ಚ್‌ 21ರಂದು ಪತ್ರ ಬರೆದಿರುವ ಆಯೋಗವು ಮಾದರಿ ನೀತಿ ಸಂಹಿತೆ ಹಾಗೂ ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು ಹಾಗೂ ಆದಷ್ಟು ಶೀಘ್ರದಲ್ಲಿ ಅನುಸರಣಾ ವರದಿ ಸಲ್ಲಿಸಬೇಕು ಎಂದು ಹೇಳಿದೆ. 

'ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಭ್ರಷ್ಟ ಚಟುವಟಿಕೆಗಳನ್ನು ನಿಯಂತ್ರಿಸಲು ರಾಜ್ಯ ಚುನಾವಣಾಧಿಕಾರಿಗಳು ವಿಫಲರಾಗಿದ್ದಾರೆ. ಅಧಿಕಾರಿಗಳಿಂದ ಕರ್ತವ್ಯ ಲೋಪ ಆಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರರಾಗಿರುವ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹೆದರುತ್ತಿದ್ದಾರೆ’ ಎಂದು ದೇವೇಗೌಡರು ದೂರಿನಲ್ಲಿ ತಿಳಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT