ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ರೈತರಿಗೆ ಖಾಲಿ ಚೊಂಬು: BJPಗೂ ಜನ ಚೊಂಬು ಕೊಡುತ್ತಾರೆ–ಸುರ್ಜೇವಾಲಾ

ಕರ್ನಾಟಕದ ರೈತರಿಗೆ ಖಾಲಿ ಚೊಂಬು ಕೊಟ್ಟಿರುವ ಬಿಜೆಪಿಗೂ ಜನ ಚೊಂಬು ಕೊಡುತ್ತಾರೆ–ಸುರ್ಜೇವಾಲಾ
Published 28 ಏಪ್ರಿಲ್ 2024, 22:27 IST
Last Updated 28 ಏಪ್ರಿಲ್ 2024, 22:27 IST
ಅಕ್ಷರ ಗಾತ್ರ

ಬೀದರ್‌: ‘ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ಹೋಪ್‌ ಸೇ ಹೇಟ್ರೆಡ್‌’’ ಆಗಿ ಬದಲಾಗಿದ್ದಾರೆ. ಇದು ಅವರು ವೈಚಾರಿಕವಾಗಿ ರಾಜಕೀಯ ದಿವಾಳಿ ಆಗಿರುವುದು ತೋರಿಸುತ್ತದೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದರು.

2014ರಲ್ಲಿ ಮೋದಿಯವರು ಹೊಸ ಆಶಾಭಾವ ಮೂಡಿಸಿದ್ದರು. ಈಗ ದ್ವೇಷದ ಮಾತುಗಳನ್ನು ಆಡುತ್ತಿದ್ದಾರೆ. ಹಿಂದೂ ಮುಸ್ಲಿಂ ವಿಭಜನೆಯ ಮಾತುಗಳನ್ನು ಆಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ಬೈಯ್ಯುವುದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸಾಂವಿಧಾನಿಕ ಅಧಿಕಾರಗಳನ್ನು ಮೊಟಕುಗೊಳಿಸುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಖಾಲಿ ಚೊಂಬು ಕೈಯಲ್ಲಿ ಹಿಡಿದುಕೊಂಡು ಆರೋಪಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಲು ಏನೂ ಉಳಿದಿಲ್ಲ. ಮೋದಿಯವರ ಹತ್ತು ವರ್ಷಗಳ ಆಡಳಿತಕ್ಕೆ ಎಷ್ಟು ಅಂಕ ಕೊಡುವಿರಿ ಎಂದು ಯಾರೋ ಒಬ್ಬರು ಬಿಜೆಪಿಯ ಹಿರಿಯ ಮುಖಂಡ ಮುರಳಿ ಮನೋಹರ್‌ ಜೋಶಿ ಅವರಿಗೆ ಕೇಳಿದ್ದರು. ಅವರು ಏನಾದರೂ ಮಾಡಿದರೆ ತಾನೇ ನಾನು ಅವರಿಗೆ ಅಂಕ ಕೊಡುವುದು ಎಂದು ಜೋಶಿ ಮರು ಪ್ರಶ್ನೆ ಹಾಕಿದ್ದರು. ಅವರ ರಾಜಕೀಯ ಗುರುಗಳೇ ಅವರ ಕುರಿತು ಹೀಗೆ ಹೇಳಿದ್ದಾರೆ’ ಎಂದು ನೆನಪಿಸಿದರು.

ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚೊಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ ಜನರು ಚುನಾವಣೆಯಲ್ಲಿ ಖಾಲಿ ಚೊಂಬನ್ನೇ ನೀಡುತ್ತಾರೆ ಎಂದು ಭವಿಷ್ಯ ನುಡಿದರು. 

‘ಮೋದಿ ಡಿಎನ್‌ಎ ಕರ್ನಾಟಕ ವಿರೋಧಿ’

‘ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಹಲವು ಕಡೆ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಆದರೆ ‘ಮೋದಿ ಗೋ ಬ್ಯಾಕ್‌’ ಎಂಬ ಘೋಷಣೆಗಳು ಎಲ್ಲ ಕಡೆ ಕೇಳಿ ಬರುತ್ತಿವೆ. ಬರ ಪರಿಹಾರದ ವಿಷಯದಲ್ಲಿ ಕರ್ನಾಟಕದ ರೈತರಿಗೆ ಘೋರ ಅನ್ಯಾಯ ಮಾಡಿರುವ ಮೋದಿ ಅವರ ಡಿಎನ್‌ಎ ಕರ್ನಾಟಕ ವಿರೋಧಿಯಾಗಿದೆ’ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಟೀಕಿಸಿದರು. ಮೋದಿ ಹಾಗೂ ಗೃಹಸಚಿವ ಅಮಿತ್‌ ಷಾ ಅವರು ಕರ್ನಾಟಕದ ರೈತರಿಗೆ ಅನ್ಯಾಯ ಮಾಡಿದ್ದಾರೆ. ಏಳು ತಿಂಗಳ ಹಿಂದೆ ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಅದಕ್ಕೆ ಸ್ಪಂದಿಸಲಿಲ್ಲ. ಕನಿಷ್ಠ ಒಂದು ಸಭೆ ಕೂಡ ಕರೆಯಲಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT