ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಲ್ಲಿ ಗೆಲ್ಲಲೇಬೇಕೆಂಬ ಹಟ: ಸಿಎಂ ಸಿದ್ದರಾಮಯ್ಯ ಮತ್ತೆ ಪ್ರಚಾರ

Published 10 ಏಪ್ರಿಲ್ 2024, 16:16 IST
Last Updated 10 ಏಪ್ರಿಲ್ 2024, 16:16 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು– ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲೇಬೇಕೆಂದು ಹಟಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೇ 12ರಿಂದ ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

12ರಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ‘ಪ್ರಜಾಧ್ವನಿ– 2’ ಸಮಾವೇಶಗಳಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ, 13ರಂದು ಮೈಸೂರು ನಗರ, ಹುಣಸೂರು, ಪಿರಿಯಾಪಟ್ಟಣದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ತಮ್ಮ ತವರು ಜಿಲ್ಲೆಯ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ, ಪಕ್ಷದ ಅಭ್ಯರ್ಥಿಗಳಾದ ಎಂ. ಲಕ್ಷ್ಮಣ್‌ ಮತ್ತು ಸುನಿಲ್‌ ಬೋಸ್‌ ಪರ ಮತ ಯಾಚಿಸಲಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ಪಕ್ಷದ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಿ ಕಾರ್ಯತಂತ್ರ ರೂಪಿಸಲಿದ್ದಾರೆ. 

ಮೈಸೂರು– ಕೊಡಗು ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅನ್ನು ಸೋಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗರ್ವಭಂಗ ಮಾಡಬೇಕೆಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ಇತ್ತೀಚೆಗೆ ಮತದಾರರಿಗೆ ಕರೆ ನೀಡಿದ್ದರು. ಅದನ್ನೇ ಸವಾಲಾಗಿ ಸ್ವೀಕರಿಸಿರುವ ಸಿದ್ದರಾಮಯ್ಯ, ಮತ್ತೊಂದು ಸುತ್ತಿನ ಪ್ರಚಾರದ ಮೂಲಕ ಮತದಾರನ್ನು ಸೆಳೆಯಲು ಮುಂದಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT