ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸೇರಲ್ಲ: ಕರಡಿ ಸಂಗಣ್ಣ

Published 22 ಮಾರ್ಚ್ 2024, 22:52 IST
Last Updated 22 ಮಾರ್ಚ್ 2024, 22:52 IST
ಅಕ್ಷರ ಗಾತ್ರ

ಕೊಪ್ಪಳ: ‘ಬಿಜೆಪಿಯಿಂದ ಟಿಕೆಟ್‌ ಕೈ ತಪ್ಪಿದರೂ ಕಾಂಗ್ರೆಸ್‌ ಸೇರುವ ವಿಚಾರ ನನ್ನ ಮುಂದೆ ಇಲ್ಲ’ ಎಂದು ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದರು.  

ಶುಕ್ರವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಕ್ಷಕ್ಕೆ ಬರುವಂತೆ ಸಚಿವ ಶಿವರಾಜ ತಂಗಡಗಿ ಆಹ್ವಾನ ನೀಡಿದ್ದಾರೆ. ಅವರಿಗೆ ಧನ್ಯವಾದಗಳು. ಆದರೆ, ಕಾಂಗ್ರೆಸ್‌ ಸೇರುವುದಿಲ್ಲ’ ಎಂದರು.

ಕಾಂಗ್ರೆಸ್‌ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ತಂಗಡಗಿ, ‘ಹಿರಿಯ ರಾಜಕಾರಣಿ ಸಂಗಣ್ಣ ಅವರು ಪಕ್ಷಕ್ಕೆ ಬಂದರೆ ಸ್ವಾಗತ. ಬರುವಂತೆ ಮನವಿ ಮಾಡುತ್ತೇನೆ’ ಎಂದಿದ್ದರು.

24ರಂದು ಸಭೆ: ಟಿಕೆಟ್‌ ಕೈ ತಪ್ಪಿದ್ದರಿಂದ ಬೇಸರಗೊಂಡಿರುವ ಸಂಗಣ್ಣ ಕರಡಿ ಅವರು ವರಿಷ್ಠರೊಂದಿಗೆ ಚರ್ಚಿಸಲು ಮಾ. 24ರಂದು ಬೆಂಗಳೂರಿನಲ್ಲಿ ಸಭೆ ನಿಗದಿಯಾಗಿದೆ. ಶಾಸಕ ಅರವಿಂದ ಬೆಲ್ಲದ ಹಾಗೂ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರು ಶುಕ್ರವಾರ ಸಂಸದರ ಮನೆಗೆ ಭೇಟಿ ನೀಡಿ ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT