ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS POLLS | ಏಪ್ರಿಲ್ 20ರಂದು ಮೋದಿ ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಪ್ರಚಾರ

Published 16 ಏಪ್ರಿಲ್ 2024, 15:48 IST
Last Updated 16 ಏಪ್ರಿಲ್ 2024, 15:48 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 20ರಂದು ರಾಜ್ಯಕ್ಕೆ ಬರಲಿದ್ದು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಅಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಬರುವ ಮೋದಿ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಚಿಕ್ಕಬಳ್ಳಾಪುರ ಮತ್ತು ಕೋಲಾರದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಬೆಂಗಳೂರು ಉತ್ತರ, ಕೇಂದ್ರ, ದಕ್ಷಿಣ ಮತ್ತು ಗ್ರಾಮಾಂತರ ಅಭ್ಯರ್ಥಿಗಳ ಪರ ಪ್ರಚಾರ ಪ್ರಚಾರ ನಡೆಸಲಿದ್ದಾರೆ.

ಇದೇ 24ರಂದು ತುಮಕೂರು ಮತ್ತು ಚಿತ್ರದುರ್ಗದಲ್ಲಿ ಪ್ರಚಾರ ನಡೆಸುವ ಸಾಧ್ಯತೆ ಇದೆ. ಈ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಅಲ್ಲದೇ ಎರಡನೇ ಹಂತದ ಮತದಾನ ನಡೆಯುವ 14 ಕ್ಷೇತ್ರಗಳ ಪ್ರದೇಶದಲ್ಲಿ ಮೂರು ಬಾರಿ ಭೇಟಿ ನೀಡಿ ಪ್ರಚಾರ ನಡೆಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT