ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ, ಅಂದ್ರೆ ಮೇ 7ರಂದು ನಡೆಯಲಿದೆ. ಕರ್ನಾಟಕದ ಉತ್ತರ ಭಾಗದ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯಲಿದೆ. ಈ ಭಾಗದಲ್ಲಿ ಒಟ್ಟು 2 ಕೋಟಿ 57 ಲಕ್ಷ ಮತದಾರ ಪೈಕಿ, 1 ಕೋಟಿ 29 ಲಕ್ಷ ಪುರುಷ ಮತದಾರರಿದ್ದಾರೆ. ಮಹಿಳಾ ಮತದಾರರ ಸಂಖ್ಯೆ 1 ಕೋಟಿ 28 ಲಕ್ಷ. ಈ ಭಾಗದಲ್ಲಿ ಬಿಸಿಲಿನ ತಾಪ ಏರುತ್ತಿರುವಂತೆಯೇ, ಚುನಾವಣಾ ಕಾವು ಹೆಚ್ಚಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರು ಪ್ರಚಾರ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.