ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್ ಪ್ರಕರಣ | ಇದೇನಾ ಮಾತೃಶಕ್ತಿಯ ಆರಾಧನೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Published 1 ಮೇ 2024, 10:47 IST
Last Updated 1 ಮೇ 2024, 10:47 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯರ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಆರೋಪ ಮತ್ತು ಅಶ್ಲೀಲ ವಿಡಿಯೊ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಗೊತ್ತಾಗದೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಸಾಧ್ಯವೇ? ಮಾತೃಶಕ್ತಿ ಪರ ಇದ್ದೇವೆ ಎನ್ನುವ ಬಿಜೆಪಿ ಎಲ್ಲಾ ಗೊತ್ತಿದ್ದು ಪ್ರಜ್ವಲ್‌ಗೆ ಟಿಕೆಟ್ ಕೊಟ್ಟಿದ್ದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್‌'ನ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

'ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೊ ಹಗರಣ ಗೊತ್ತಿದ್ದೂ ಕೂಡ ಬಿಜೆಪಿ ಪಕ್ಷ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದು ಮೊದಲ ತಪ್ಪು, ಅವರಿಗೆ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್‌ ನೀಡಿದ್ದು ಎರಡನೇ ತಪ್ಪು, ಹಗರಣ ಬೆಳಕಿಗೆ ಬಂದ ಮೇಲೆ ಅವರನ್ನು ವಿದೇಶಕ್ಕೆ ಓಡಿ ಹೋಗಲು ಬಿಟ್ಟಿದ್ದು ಇನ್ನೊಂದು ತಪ್ಪು. ಪ್ರಧಾನಿ ನರೇಂದ್ರ ಮೋದಿ ಅವರೇ, ಇದೇನಾ ನಿಮ್ಮ ಮಾತೃಶಕ್ತಿಯ ಆರಾಧನೆ ಎಂದರೆ?' ಎಂದು ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT