ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಗೆ ಸಿದ್ಧತೆ: ಸಂಭಾವ್ಯ ಅಭ್ಯರ್ಥಿಗಳ ಜೊತೆ ಸಿಎಂ, ಡಿಸಿಎಂ ಚರ್ಚೆ

Published 21 ಮಾರ್ಚ್ 2024, 15:08 IST
Last Updated 21 ಮಾರ್ಚ್ 2024, 15:08 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಿದ್ಧತೆಗಳನ್ನು ತೀವ್ರಗೊಳಿಸುವ ಕುರಿತಂತೆ ಸಚಿವರು, ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳಾದ ಬಾಗಲಕೋಟೆ– ಸಂಯುಕ್ತಾ ಪಾಟೀಲ, ಬೆಂಗಳೂರು ಕೇಂದ್ರ–ಮನ್ಸೂರ್ ಅಲಿ ಖಾನ್, ಧಾರವಾಡ– ವಿನೋದ್ ಅಸೂಟಿ, ಚಿತ್ರದುರ್ಗ– ಬಿ.ಎನ್‌. ಚಂದ್ರಪ್ಪ, ಉಡುಪಿ– ಚಿಕ್ಕಮಗಳೂರು– ಕೆ. ಜಯಪ್ರಕಾಶ್ ಹೆಗ್ಡೆ, ತುಮಕೂರು– ಎಸ್‌.ಪಿ. ಮುದ್ದಹನುಮೇಗೌಡ, ದಕ್ಷಿಣ ಕನ್ನಡ– ಪದ್ಮರಾಜ್, ಬಳ್ಳಾರಿ– ಇ. ತುಕಾರಾಂ, ರಾಯಚೂರು– ಕುಮಾರ ನಾಯಕ್, ಬೆಂಗಳೂರು ದಕ್ಷಿಣ– ಸೌಮ್ಯಾ ರೆಡ್ಡಿ, ಉತ್ತರ ಕನ್ನಡ– ಅಂಜಲಿ ನಿಂಬಾಳ್ಕರ್, ಮಂಡ್ಯ– ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು), ಮೈಸೂರು– ಎಂ. ಲಕ್ಷ್ಮಣ್, ಬೆಂಗಳೂರು ಉತ್ತರ– ಎಂ.ವಿ. ರಾಜೀವ್ ಗೌಡ, ಬೀದರ್– ಸಾಗರ್ ಖಂಡ್ರೆ, ಬೆಳಗಾವಿ– ಮೃಣಾಲ್‌ ಹೆಬ್ಬಾಳಕರ ಇದ್ದರು.

ಸಚಿವರಾದ ಎಚ್.ಸಿ. ಮಹದೇವಪ್ಪ, ಸಂತೋಷ್ ಎಸ್‌. ಲಾಡ್, ಆರ್.ಬಿ. ತಿಮ್ಮಾಪುರ, ಜಮೀರ್ ಅಹಮದ್ ಖಾನ್, ಎಂ.ಸಿ. ಸುಧಾಕರ್, ಶರಣಪ್ರಕಾಶ್ ಪಾಟೀಲ, ಎಚ್.ಕೆ. ಪಾಟೀಲ, ಕೆ.ಎನ್. ರಾಜಣ್ಣ, ಕೆ. ವೆಂಕಟೇಶ್, ರಾಮಲಿಂಗಾ ರೆಡ್ಡಿ, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳಕರ, ಈಶ್ವರ್ ಖಂಡ್ರೆ, ಶಿವಾನಂದ ಪಾಟೀಲ, ಡಿ. ಸುಧಾಕರ್, ರಹೀಂ ಖಾನ್, ಮಂಕಾಳ ವೈದ್ಯ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹಮದ್, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಪಕ್ಷದ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಕೂಡಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT