ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ಬ್ರಿಜೇಶ್ ಚೌಟ ಪರ ಅಣ್ಣಾಮಲೈ ರೋಡ್ ಶೋ

Published 23 ಏಪ್ರಿಲ್ 2024, 14:38 IST
Last Updated 23 ಏಪ್ರಿಲ್ 2024, 14:38 IST
ಅಕ್ಷರ ಗಾತ್ರ

ಪುತ್ತೂರು: ‘ಮುಂದಿನ 25 ವರ್ಷಗಳಲ್ಲಿ ದೇಶ ಯಾವ ಹಾದಿಯಲ್ಲಿ ಸಾಗುತ್ತದೆ ಎಂಬುದನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲೇ ನಿರ್ಧರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ರಾಷ್ಟ್ರ ಸಮಗ್ರ ಅಭಿವೃದ್ಧಿ ಮತ್ತು ಸಮಗ್ರತೆಯನ್ನು ಗಮನದಲ್ಲಿರಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕು’ ಎಂದು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವ ಅಣ್ಣಾಮಲೈ ಅವರು ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮಂಗಳವಾರ ಪುತ್ತೂರಿನಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಿ, ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಮತದಾರನ್ನು ಉದ್ದೇಶಿಸಿ ಅವರು ಮಾತನಾಡಿದರು.

ದ.ಕ. ಜಿಲ್ಲೆಯ ಜನತೆ ಸದಾ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬ್ರಿಜೇಶ್ ಚೌಟ ಅವರನ್ನು ದಾಖಲೆಯ ಮತಗಳ ಅಂತರದಿಂದ ಗೆಲ್ಲಿಸಿಕೊಡಬೇಕು. ಅದಕ್ಕಾಗಿ ಪಕ್ಷದ ಕಾರ್ಯಕರ್ತರೆಲ್ಲಾ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದರು.

ಅಭ್ಯರ್ಥಿ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್, ಬಿಜೆಪಿ ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ತಿಮ್ಮಪ್ಪ ಚನಿಲ, ಅರುಣ್ ಕುಮಾರ್ ಪುತ್ತಿಲ, ಆರ್.ಸಿ.ನಾರಾಯಣ್, ನಿತೀಶ್ ಶಾಂತಿವನ, ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ಜೆಡಿಎಸ್‌ನ ಪ್ರಭಾಕರ್, ಕೈಲಾಸ್ ಗೌಡ ಭಾಗವಹಿಸಿದ್ದರು.

ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಘೋಷಿಸುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷಕ್ಕೇ ವ್ಯಾರಂಟಿ ಇಲ್ಲ. ವ್ಯಾರಂಟಿ ಇಲ್ಲದೆ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಿಸುತ್ತಿದೆ ಎಂದು ಟೀಕಿಸಿದರು.

ಅಣ್ಣಾಮಲೈ ಅವರು ಬ್ರಿಜೇಶ್ ಚೌಟ ಪರ ನಗರದ ದರ್ಬೆ ವೃತ್ತದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ವರೆಗೆ ಶೋ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT