ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ರೇಣುಕಾಚಾರ್ಯ ಸಹೋದರ ಸ್ಪರ್ಧೆ

Published 5 ಏಪ್ರಿಲ್ 2024, 16:40 IST
Last Updated 5 ಏಪ್ರಿಲ್ 2024, 16:40 IST
ಅಕ್ಷರ ಗಾತ್ರ

ಚಿತ್ರದುರ್ಗ: ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಡಾ.ಎಂ.ಪಿ.ದಾರಕೇಶ್ವರಯ್ಯ ಅವರು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

‘ಬೇಡ ಜಂಗಮ’ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಲ್ಲಿಸಿದ ನಾಮಪತ್ರ ಸ್ವೀಕೃತಗೊಂಡಿದೆ. ಇವರ ಪತ್ನಿ ಎಂ.ಇ.ಸುಜಾತ ನಾಮಪತ್ರ ತಿರಸ್ಕೃತಗೊಂಡಿದೆ.

‘ಚಿತ್ರದುರ್ಗದಲ್ಲಿ ಸುದೀರ್ಘ ಅವಧಿಗೆ ವೈದ್ಯನಾಗಿ ಸೇವೆ ಸಲ್ಲಿಸಿದ್ದೇನೆ. ಗ್ರಾಮೀಣ ಪ್ರದೇಶದ ಜನರು ಅಪಾರವಾದ ವಿಶ್ವಾಸ ಇಟ್ಟಿದ್ದಾರೆ. ಜನರ ಅಪೇಕ್ಷೆಯ ಮೇರೆಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ‘ಬೇಡ ಜಂಗಮ’ 2012ರಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದು, ಈವರೆಗೆ ನಾಲ್ಕು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ’ ಎಂದು ದಾರಕೇಶ್ವರಯ್ಯ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT