ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಜ್‌ ಕುಮಾರ್ ನಟನೆಯ ಸಿನಿಮಾಗಳ ಮೇಲೆ ನಿರ್ಬಂಧ ವಿಧಿಸಬೇಕು: ಬಿಜೆಪಿ

Published 22 ಮಾರ್ಚ್ 2024, 8:56 IST
Last Updated 22 ಮಾರ್ಚ್ 2024, 8:56 IST
ಅಕ್ಷರ ಗಾತ್ರ

ಬೆೆಂಗಳೂರು: ಚಲನಚಿತ್ರ ನಟ ಶಿವರಾಜ್‌ ಕುಮಾರ್ ಅವರು ಕಾಂಗ್ರೆಸ್‌ ಪಕ್ಷ ಮತ್ತು ಆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವುದರಿಂದ ಅವರು ಅಭಿನಯಿಸಿರುವ ಚಲನಚಿತ್ರಗಳು ಮತ್ತು ಅವರು ಇರುವ ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಅವರೊಬ್ಬ ಜನಪ್ರಿಯ ನಟರಾಗಿದ್ದು, ಸಾರ್ವಜನಿಕರ ಮೇಲೆ ಪ್ರಭಾವ ಹೊಂದಿದ್ದಾರೆ. ನ್ಯಾಯಸಮ್ಮತ ಚುನಾವಣೆ ನಡೆಯಬೇಕಾಗಿರುವುದರಿಂದ ಚುನಾವಣೆಗಳು ಮುಗಿಯುವವರೆಗೆ ಅವರ ಚಲನಚಿತ್ರಗಳು, ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸಬೇಕು. ಆದ್ದರಿಂದ ಚಲನಚಿತ್ರಮಂದಿರಗಳು, ಟಿವಿ. ಚಾನೆಲ್‌ಗಳು, ಸಾಮಾಜಿಕ ಜಾಲತಾಣ ಮತ್ತು ಒಟಿಟಿಗಳಿಗೆ ಈ ಸಂಬಂಧ ಆದೇಶ ಹೊರಡಿಸಬೇಕು ಎಂದು ಬಿಜೆಪಿ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT