ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾರ ಭಯ ಕಾಡಿದೆ?: ಬಿಜೆಪಿ

Published 1 ಏಪ್ರಿಲ್ 2024, 23:30 IST
Last Updated 1 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ವರುಣ ಕ್ಷೇತ್ರದಲ್ಲಿ 60 ಸಾವಿರ ಮತಗಳ ಲೀಡ್‌ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾರ ಭಯ ಕಾಡಿದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ಕುಮಾರ್‌ ಪ್ರಶ್ನಿಸಿದ್ದಾರೆ.

‘ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತಕೊಡಿ ಎನ್ನುವುದು ತಪ್ಪಲ್ಲ. ಆದರೆ, ಸಿದ್ದರಾಮಯ್ಯ ಅಧಿಕಾರ ಕೈತಪ್ಪುವ ಭೀತಿಯನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ. ಬಹುಮತ ಸರ್ಕಾರದ ಮುಖ್ಯಮಂತ್ರಿ ಯಾರ ಭಯಕ್ಕೆ ಈ ಮಾತು ಹೇಳಿದ್ದಾರೆಂಬುದು ಕರ್ನಾಟಕದ ಜನರಿಗೆ ಗೊತ್ತಾಗಬೇಕು’ ಎಂದು ಅವರು ಹೇಳಿದ್ದಾರೆ.

‘ಸಿದ್ದರಾಮಯ್ಯ ಅವರೇ ನಿಮಗೆ ಯಾರ ಭಯ? ಹೈಕಮಾಂಡ್‌ನದೋ, ಶಿವಕುಮಾರ್ ಅವರದ್ದೋ ಅಥವಾ ಶಾಸಕರದ್ದೋ? ನಿಮಗೆ ನಿಮ್ಮ ಅಧಿಕಾರದ ಬಗ್ಗೆಯೇ ಗ್ಯಾರಂಟಿ ಇಲ್ಲ. ಇನ್ನು ಜನತೆಗೆ ಯಾವ ಗ್ಯಾರಂಟಿ ಕೊಡುತ್ತೀರಿ ಎನ್ನುವುದನ್ನು ನಾಡಿಗೆ ಸ್ಪಷ್ಟಪಡಿಸಿ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT