ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಸಿಎಂ, ಡಿಕೆಶಿ ಏಕೈಕ ಡಿಸಿಎಂ: ಕಾಂಗ್ರೆಸ್‌ನಿಂದ ಅಧಿಕೃತ ಘೋಷಣೆ

ಲೋಕಸಭೆ ಚುನಾವಣೆ ವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿರುವ ಡಿಕೆಶಿ: ಕೆ.ಸಿ ವೇಣುಗೋಪಾಲ್‌ ಸ್ಪಷ್ಟನೆ
Published 18 ಮೇ 2023, 6:55 IST
Last Updated 18 ಮೇ 2023, 6:55 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿಯೂ, ಡಿ.ಕೆ ಶಿವಕುಮಾರ್‌ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿಯೂ ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್‌ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಗುರುವಾರ ಅಧಿಕೃತವಾಗಿ ಘೋಷಣೆ ಮಾಡಿದರು.

ಸರ್ಕಾರದಲ್ಲಿ ಡಿ.ಕೆ ಶಿವಕುಮಾರ್‌ ಏಕೈಕ ಡಿಸಿಎಂ ಆಗಿರಲಿದ್ದಾರೆ. ಜತೆಗೆ 2024 ಲೋಕಸಭೆ ಚುನಾವಣೆ ವರೆಗೆ ಅವರೇ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದೂ ವೇಣುಗೋಪಾಲ್‌ ಹೇಳಿದರು.

ಇಂದು ಸಂಜೆ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಔಪಚಾರಿಕವಾಗಿ ಆಯ್ಕೆಯಾಗಲಿದ್ದಾರೆ ಎಂದರು.

ಮೇ 20ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಿಎಂ, ಡಿಸಿಎಂ ಮತ್ತು ಸಚಿವರು ಪ್ರತಿಜ್ಞಾ ವಿಧಿ ಪಡೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT