ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಭ್ರಷ್ಟರಿಗಿಲ್ಲಿ ಜಾಗವಿಲ್ಲ’: ಹೆಬ್ಬಾರ್ ವಿರುದ್ಧ ಪೋಸ್ಟರ್

Published 25 ಮಾರ್ಚ್ 2024, 21:03 IST
Last Updated 25 ಮಾರ್ಚ್ 2024, 21:03 IST
ಅಕ್ಷರ ಗಾತ್ರ

ಶಿರಸಿ: ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ ಕಾಂಗ್ರೆಸ್‌ ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಗೋಡೆಯ ಮೇಲೆ ಸೋಮವಾರ ‘ನಮ್ಮ‌‌ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ’ ಎಂಬ ಪೋಸ್ಟರ್ ಅಂಟಿಸಿ, ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಾಯಕರು, ಕಾರ್ಯಕರ್ತರು ಸಭೆ ಏರ್ಪಾಟಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವರು ಈ ಕೃತ್ಯವೆಸಗಿದ್ದಾರೆ. ಸಭೆ ಶುರುವಿಗೂ ಮುನ್ನ ಕೆಲವರು ಪೋಸ್ಟರ್ ಅಂಟಿಸುವುದರ ಜೊತೆಗೆ ಚಿತ್ರ, ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟರು.

‘ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿ, ಸಚಿವರಾಗಿದ್ದ ಹೆಬ್ಬಾರ್ ಪುನಃ ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸಿದ್ದಾರೆ. ಇದಕ್ಕೆ ಕೆಲ ಸಚಿವರು, ಶಾಸಕರ ವಿರೋಧವಿತ್ತು. ಪಕ್ಷದ ಕಾರ್ಯಕರ್ತರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಕಚೇರಿಯಲ್ಲಿನ ವಿದ್ಯಮಾನಕ್ಕೆ ಕಾಂಗ್ರೆಸ್‌ನವರೇ ಹೊಣೆ. ಪೋಸ್ಟರ್ ಅಂಟಿಸಿದ್ದು ಯಾರು ಎಂಬ ಬಗ್ಗೆ ಮಾಹಿತಿ ಇಲ್ಲದಿರುವಾಗ ಅದಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ.
–ಶಿವರಾಮ ಹೆಬ್ಬಾರ್ ಶಾಸಕ ಯಲ್ಲಾಪುರ
ಕಚೇರಿ ಗೋಡೆಗಳಿಗೆ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿದ್ದು ಯಾರು ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರೇ ಪೋಸ್ಟರ್ ಹಚ್ಚಿದ್ದರೆ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
–ಸಾಯಿ ಗಾಂವಕರ್ ಅಧ್ಯಕ್ಷ ಕಾಂಗ್ರೆಸ್ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT