ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ: ಡಾ.ಚೌಡಯ್ಯ

ರಾಜ್ಯ ಭೋವಿ (ವಡ್ಡರ) ಸಂಘದ ಪ್ರಧಾನ ಕಾರ್ಯದರ್ಶಿ ಚೌಡಯ್ಯ
Published 23 ಏಪ್ರಿಲ್ 2024, 14:31 IST
Last Updated 23 ಏಪ್ರಿಲ್ 2024, 14:31 IST
ಅಕ್ಷರ ಗಾತ್ರ

ನೆಲಮಂಗಲ: ‘ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟ ಜಾತಿ, ಪರಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಹಾಗಾಗಿ, ಈ ಚುನಾವಣೆಯಲ್ಲಿ ನಮ್ಮ ಸಮುದಾಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಬೆಂಬಲಿಸಲಿದೆ‘ ಎಂದು ರಾಜ್ಯ ಭೋವಿ (ವಡ್ಡರ) ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಚೌಡಯ್ಯ ತಿಳಿಸಿದರು.

ಪಟ್ಟಣದಲ್ಲಿ ರಾಜ್ಯ ಭೋವಿ (ವಡ್ಡರ) ಸಂಘ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದವರ ಏಳಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ನಿರಂತರವಾಗಿ ನೀಡುತ್ತಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಸೂಚಿಸುತ್ತಿದ್ದೇವೆ‘ ಎಂದು ಹೇಳಿದರು.

ಈಚೆಗಷ್ಟೇ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿರುವ ಗ್ರಾ.ಪಂ.ಸದಸ್ಯ ಪೈಂಟ್‌ ಮಂಜುನಾಥ್‌ ಮಾತನಾಡಿ, ‘ಶಾಸಕ ಎನ್‌.ಶ್ರೀನಿವಾಸ್‌ ಅವರು ನಮ್ಮ ಕ್ಷೇತ್ರಕ್ಕೆ ₹900 ಕೋಟಿಗೂ ಹೆಚ್ಚು ಅನುದಾನವನ್ನು ತಂದಿದ್ದಾರೆ. ರಕ್ಷಾ ರಾಮಯ್ಯ ಅವರನ್ನು ಆರಿಸಿ ಕಳುಹಿಸಿದರೆ, ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ವೇಗ ಸಿಕ್ಕಂತಾಗುತ್ತದೆ. ಹಾಗಾಗಿ ನಮ್ಮ ಸಮುದಾಯ ಅವರಿಗೆ ಬೆಂಬಲವಾಗಿ ನಿಲ್ಲಲಿದೆ‘ ಎಂದರು.

ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜಯಶಂಕರ್‌, ಸಂಘದ ಜಂಟಿ ಕಾರ್ಯದರ್ಶಿ ರಾಜಣ್ಣ, ಕೆಪಿಸಿಸಿ ಸದಸ್ಯ ನಾಗೇಶ್‌, ಮುಖಂಡರಾದ ಗೋವರ್ಧನ್‌(ಗೋಪಿ), ಪ್ರದೀಪ್‌, ಜಯರಾಮು, ಪುರಸಭೆ ಮಾಜಿ ಅಧ್ಯಕ್ಷ ಆರ್‌.ಉಮಾಶಂಕರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT