ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಮೋದಿ ಭಾವಚಿತ್ರವಿರುವ ಟೀ ಶರ್ಟ್‌, ಟೋಪಿ ಜಪ್ತಿ

Published 10 ಏಪ್ರಿಲ್ 2024, 13:37 IST
Last Updated 10 ಏಪ್ರಿಲ್ 2024, 13:37 IST
ಅಕ್ಷರ ಗಾತ್ರ

ಬೀದರ್‌: ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ, ಬಿಜೆಪಿಯ ಕಮಲ ಚಿಹ್ನೆ ಹೊಂದಿರುವ ಟೀ ಶರ್ಟ್‌, ಟೋಪಿಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ ₹9.51 ಲಕ್ಷ ಎಂದು ಅಂದಾಜಿಸಲಾಗಿದೆ.

ಚುನಾವಣಾಧಿಕಾರಿಯಿಂದ ಅನುಮತಿ ಪಡೆಯದೇ ಟೀ ಶರ್ಟ್‌, ಟೋಪಿಗಳನ್ನು ಕಲಬುರಗಿಯಿಂದ ಬೀದರ್‌ ಕಡೆಗೆ ಮಂಗಳವಾರ ಸಾಗಿಸಲಾಗುತ್ತಿತ್ತು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ತುಮಕುಂಟಾ ಚೆಕ್‌ಪೋಸ್ಟ್‌ ಬಳಿ ವಾಹನ ಪರಿಶೀಲಿಸಿದಾಗ ಪತ್ತೆಯಾಗಿವೆ. ಅನುಮತಿ ಪಡೆಯದ ಕಾರಣ ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಪ್ರಚಾರಕ್ಕೆ ಸಾಮಗ್ರಿಗಳನ್ನು ಕೊಂಡೊಯ್ಯಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಂಚೋಳಿ ತಾಲ್ಲೂಕು ಬೀದರ್‌ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT