ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸತ್ಯವನ್ನೇ ಹೇಳಿ ಮತ ಕೇಳಿ: ಎಂ.ಕೆ.ಸೋಮ ಶೇಖರ್‌

Published 26 ಮಾರ್ಚ್ 2024, 20:18 IST
Last Updated 26 ಮಾರ್ಚ್ 2024, 20:18 IST
ಅಕ್ಷರ ಗಾತ್ರ

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ವಾರ್ಡ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾದವರಿಗೆ ನೇಮಕಾತಿ ಪತ್ರಗಳನ್ನು ಪಕ್ಷದ ಮುಖಂಡ ಎಂ.ಕೆ.ಸೋಮ
ಶೇಖರ್‌ ಮಂಗಳವಾರ ನೀಡಿದರು.

ನಂತರ ಮಾತನಾಡಿ, ‘ಯುವ ಸಮುದಾಯವೇ ದೇಶದ ಆಸ್ತಿ. ಮುಂದಿನ ಲೋಕಸಭಾ ಚುನಾವಣೆಯು ದೇಶದ ರಾಜಕೀಯ ಚಿತ್ರವನ್ನೇ ಬದಲಾಯಿಸಲಿದೆ. ‍ಸತ್ಯವನ್ನೇ ಹೇಳುವ ಮೂಲಕ ಕಾರ್ಯಕರ್ತರು ಮತ ಕೇಳಬೇಕು’ ಎಂದರು. 

‘ಪ್ರಧಾನಿ ನರೇಂದ್ರ ಮೋದಿ ಯುವಕರಿಗೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದ ಕ್ಷಣವೇ ಯುವಕರಿಗೆ ಪಕೋಡಾ ಮಾರಲು ಹೇಳಿ ದ್ರೋಹ ಎಸಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದರು. ಇದನ್ನು ಜನರಿಗೆ ತಲುಪಿಸಬೇಕು’ ಎಂದು ತಿಳಿಸಿದರು.

‘ಯುವ ನಿಧಿ ಯೋಜನೆ ಮೂಲಕ ಪದವೀಧರರಿಗೆ ಮಾಸಿಕ ₹ 3,000, ಡಿಪ್ಲೊಮಾ ಪದವೀಧರರಿಗೆ ₹ 1,500 ನೀಡಲಾಗುತ್ತಿದೆ. ಉದ್ಯೋಗ ಮೇಳ, ಕೌಶಲಾಭಿವೃದ್ಧಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯುವ ಕಾಂಗ್ರೆಸ್ ಪದಾಧಿಕಾರಿಗಳು ಈ ಬಗ್ಗೆ ಯುವ ಸಮುದಾಯಕ್ಕೆ ತಿಳಿಸಿ ಜಾಗೃತಿ ಮೂಡಿಸಬೇಕು’ ಎಂದರು.

ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್, ಕೃಷ್ಣರಾಜ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್,  ಮುಖಂಡರಾದ ರವಿಶಂಕರ್, ಅಸಂಘಟಿತ ಕಾರ್ಮಿಕರ ವಿಭಾಗದ ಅಧ್ಯಕ್ಷ ವಿನಯ್ ಕುಮಾರ್, ಮಂಜುನಾಥ್ , ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಕುಮಾರ್ ಕುಮ್ಮಿ, ಶಂಕರ್, ಗುಣಶೇಖರ್, ಮೊಹಮ್ಮದ್‌ ಫಾರೂಖ್, ಜಗನ್ನಾಥ್ ಭೋವಿ, ಸುಂದರ್, ರಾಘವೇಂದ್ರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT