ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 2 ದಿನ ಮುಖ್ಯಮಂತ್ರಿ ಮೈಸೂರು ಪ್ರವಾಸ

Published 10 ಏಪ್ರಿಲ್ 2024, 16:13 IST
Last Updated 10 ಏಪ್ರಿಲ್ 2024, 16:13 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.12 ಹಾಗೂ 13ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ‘ಪ್ರಜಾಧ್ವನಿ–2’ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

12ರಂದು ಬೆಳಿಗ್ಗೆ 10.40ಕ್ಕೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಲಿಂಗನಾಪುರ ಗ್ರಾಮದ ಹೆಲಿಪ್ಯಾಡ್‌ಗೆ ಬಂದಿಳಿಯುವರು. ಬಳಿಕ ಕೊಳ್ಳೇಗಾಲ ಪಟ್ಟಣದಲ್ಲಿ ಆಯೋಜಿಸಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12ಕ್ಕೆ ಹೆಲಿಕಾಪ್ಟರ್‌ನಲ್ಲಿ ಹೊರಟು 12.55ಕ್ಕೆ ಮೈಸೂರಿನ ವಿಮಾನನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ನಂಜನಗೂಡು ಪಟ್ಟಣಕ್ಕೆ ತೆರಳಿ ಅಲ್ಲಿ ಆಯೋಜಿಸಿರುವ ಪ್ರಚಾರ ಸಭೆ, ಸಂಜೆ 4.45ಕ್ಕೆ ಎಚ್.ಡಿ. ಕೋಟೆ ಪಟ್ಟಣದಲ್ಲಿ ನಡೆಯುವ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. 12ರಂದು ಇಡೀ ದಿನ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಪ್ರಚಾರ ನಡೆಸಿ ಮತ ಯಾಚಿಸಲಿದ್ದಾರೆ.

ಏ.13ರಂದು ಬೆಳಿಗ್ಗೆ 11ಕ್ಕೆ ಕೃಷ್ಣರಾಜ ಕ್ಷೇತ್ರದಲ್ಲಿ, ಮಧ್ಯಾಹ್ನ 1.30ಕ್ಕೆ ಹುಣಸೂರು ಹಾಗೂ ಸಂಜೆ 5ಕ್ಕೆ ಪಿರಿಯಾಪಟ್ಟಣದಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಪರವಾಗಿ ಮತ ಯಾಚಿಸಲಿದ್ದಾರೆ. ರಾತ್ರಿ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT