ಟಿಕೆಟ್ ಕೋರಿ 24 ಆಕಾಂಕ್ಷಿಗಳು
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಕೋರಿ 24 ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಕೆಪಿಸಿಸಿ ಪ್ರತಿನಿಧಿಯಾಗಿ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಟಿಕೆಟ್ ಆಕಾಂಕ್ಷಿಗಳು ಅವಕಾಶ ಕೋರಿದ್ದರು.
ಚಿತ್ರದುರ್ಗ ಜಿಲ್ಲೆಯ ಆರು ಹಾಗೂ ತುಮಕೂರು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸಿಕ್ಕ ಅಭೂತಪೂರ್ವ ಗೆಲುವಿನ ಕಾರಣಕ್ಕೆ ಕೈ ಪಾಳೆಯದಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡು ಸೃಷ್ಟಿಯಾಗಿತ್ತು.