ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls: ಎರಡನೇ ಹಂತದ ಮತದಾನ, ಮಂಗಳವಾರ 49 ನಾಮಪತ್ರ ಸಲ್ಲಿಕೆ

Published 16 ಏಪ್ರಿಲ್ 2024, 15:36 IST
Last Updated 16 ಏಪ್ರಿಲ್ 2024, 15:36 IST
ಅಕ್ಷರ ಗಾತ್ರ

ಬೆಂಗಳೂರು: ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ 49 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರೊಂದಿಗೆ ಈ ಕ್ಷೇತ್ರಗಳಲ್ಲಿ ಚುನಾವಣಾ ಕಣಕ್ಕಿಳಿದಿರುವ ಅಭ್ಯರ್ಥಿಗಳ ಸಂಖ್ಯೆ 123ಕ್ಕೆ ಏರಿದೆ.

ಮಂಗಳವಾರ 39 ಪುರುಷರು ಮತ್ತು ಒಬ್ಬ ಮಹಿಳಾ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಕೆಲವರು ಒಂದಕ್ಕಿಂತ ಹೆಚ್ಚು ಪ್ರತಿಗಳನ್ನು ಸಲ್ಲಿಸಿದ್ದಾರೆ. ಈ 14 ಕ್ಷೇತ್ರಗಳಲ್ಲಿ ಈವರೆಗೆ ಒಟ್ಟು 112 ಪುರುಷರು ಮತ್ತು 11 ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್‌ ಮೀನಾ ತಿಳಿಸಿದ್ದಾರೆ.

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಸಾಗರ್‌ ಖಂಡ್ರೆ, ಉತ್ತರ ಕನ್ನಡ ಕ್ಷೇತ್ರದಲ್ಲಿ ಡಾ. ಅಂಜಲಿ ನಿಂಬಾಳ್ಕರ್‌ ಮತ್ತು ಧಾರವಾಡದಲ್ಲಿ ವಿನೋದ್‌ ಅಸೂಟಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಹಾಗೂ ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಪುಟ್ಟರಾಜ ಹಣಮಂತ ನಂದಿ ಕಣಕ್ಕಿಳಿದಿದ್ದಾರೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ರಾಜಾ ವೇಣುಗೋಪಾಲ ನಾಯಕ ಕೂಡ ಮಂಗಳವಾರವೇ ಉಮೇದುವಾರಿಕೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT