ಕಲಬುರಗಿ: ಸೂಕ್ತ ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿಯನ್ನು ಜಿಲ್ಲೆಯ ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ ವಶಕ್ಕೆ ಪಡೆಯಲಾಗಿದೆ.
ಇವುಗಳ ಒಟ್ಟಾರೆ ಮೌಲ್ಯ ₹ 6,37,670 ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಬಿ. ಅವರು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಪ್ರಯುಕ್ತ ಅಕ್ರಮ ತಡೆಯಲು ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.