ಹುಬ್ಬಳ್ಳಿಯ ಪ್ರಮುಖ ನಾಯಕರು ದೆಹಲಿಗೆ ಹೋಗಿದ್ದಾರೆಂದರೆ ಅದಕ್ಕೆ ಅಪಾರ್ಥ ಕಲ್ಪಿಸುವುದು ಸರಿಯಲ್ಲ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಜಗದೀಶ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 'ಪಕ್ಷದ ಕೆಲಸಕ್ಕಾಗಿ ಅಥವಾ ತಮ್ಮ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿರಬಹುದು. ಇದಕ್ಕೆ ಬೇರೆ ಅರ್ಥ ಕಲ್ಪಿಸಬಾರದು’ ಎಂದರು.‘ನನಗೆ ಟಿಕೆಟ್ ತಪ್ಪಿಸಲು ಕುತಂತ್ರ, ಷಡ್ಯಂತ್ರ ನಡೆದಿದೆ ಎಂದು ನಾನು ಒಪ್ಪುವುದಿಲ್ಲ. ಬೇರೆ ಬೇರೆ ರಾಜ್ಯಗಳ ಟಿಕೆಟ್ ಹಂಚಿಕೆ ಬಗ್ಗೆಯೂ ಚರ್ಚೆ ನಡೆದಿದೆ. ಇದಲ್ಲದೇ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬೇರೆ ಬೇರೆ ರಾಜ್ಯಗಳಲ್ಲಿ ಪ್ರವಾಸ ಮಾಡುತ್ತಿರುವುದರಿಂದ ಟಿಕೆಟ್ ಹಂಚಿಕೆ ವಿಳಂಬವಾಗಿದೆ ಹೊರತು ಬೇರೆ ಯಾವುದೇ ಕಾರಣ ಅಲ್ಲ’ ಎಂದು ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.