ಪ್ರತಿಷ್ಠೆಯನ್ನೇ ಪಣಕ್ಕಿಟ್ಟು ಚುನಾವಣೆಯಲ್ಲಿ ಹೋರಾಟ ನಡೆಸಿದ್ದ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ‘ಈ ಚುನಾವಣೆ ಸೋತರೆ ನಾನು ಇದ್ದೂ ಸತ್ತಂತೆ’ ಎನ್ನುವ ಮೂಲಕ ಭಾವನಾತ್ಮಕವಾಗಿ ಮಂಡ್ಯ ಮತದಾರರಿಗೆ ಗಾಳ ಬೀಸಿದ್ದ ಎಚ್‌ಡಿಕೆ, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಮಣಿಸಿದ್ದಾರೆ. ಕಾಂಗ್ರೆಸ್ ಶಾಸಕರ ಏಳು ಸುತ್ತಿನ ಕೋಟೆಯನ್ನು ಭೇದಿಸಿ ಜಯಭೇರಿ ಬಾರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.