ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ; ಕಾಂಗ್ರೆಸ್ ಆತ್ಮಾವಲೋಕನ: ಎಂ.ಬಿ.ಪಾಟೀಲ

Published 8 ಜೂನ್ 2024, 6:02 IST
Last Updated 8 ಜೂನ್ 2024, 6:02 IST
ಅಕ್ಷರ ಗಾತ್ರ

ಬೆಂಗಳೂರು: 'ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ' ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ, 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ' ಎಂದು

'ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು' ಎಂದು ಅವರು ಹೇಳಿದರು.

'ಕಳೆದ ಒಂದು ವರ್ಷದಲ್ಲಿ ರಾಜ್ಯ ಸರ್ಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ' ಎಂದರು.

'ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಬಾರಿ ಬಿಜೆಪಿ ಬಲ ಕುಸಿದಿದೆ. ಹೀಗಾಗಿ ಈ ಸಲ ಅವರ ಸರ್ಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶಕುಮಾರ್ ಅವರಂತಹ ವ್ಯಕ್ತಿಯನ್ನು ಇಟ್ಟುಕೊಂಡು ಸರ್ಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ' ಎಂದರು.

'ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಾಸ್ಥಾನಗಳಲ್ಲಿ ಬಿಜೆಪಿ ಹೆಚ್ಚಿನ ಕಡೆ ಸೋಲಲಿದೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ಅದೇ ರೀತಿ ಆಗಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT