ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜರಂಗದಳ ನಿಷೇಧಿಸುವುದು ತಿರುಕನ ಕನಸು: ಯಡಿಯೂರಪ್ಪ

Published 4 ಮೇ 2023, 20:37 IST
Last Updated 4 ಮೇ 2023, 20:37 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ’ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎನ್ನುತ್ತಾರೆ. ಆದರೆ, ಅದು ತಿರುಕನ ಕನಸು. ಅದನ್ನು ಭಾರತೀಯರು ಯಾರು ಕ್ಷಮಿಸುವುದಿಲ್ಲ' ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಹೆಸರಘಟ್ಟ ಮುಖ್ಯರಸ್ತೆಯ ಪಾಟೀದಾರ್ ಸಮಾಜದಲ್ಲಿ ದಾಸರಹಳ್ಳಿ ಕ್ಷೇತ್ರದ ಅಭ್ಯರ್ಥಿ ಎಸ್. ಮುನಿರಾಜು ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

'ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಯಾರೋ ನಾಯಕ? ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ, ಅಮಿತ್ ಶಾ ಮುಂದೆ ಸಮ ಏನು‘ ಎಂದು ಪ್ರಶ್ನಿಸಿದರು.

'ಮೋದಿ ಅವರು ಕರ್ನಾಟಕದ ಬಗ್ಗೆ ವಿಶೇಷ ಅಭಿಮಾನ ಇರಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ರೋಡ್ ಶೋ ನಡೆಸುತ್ತಿರುವ ಮೋದಿ ಅವರಿಗೆ ಗೌರವ ತರಬೇಕಾದರೆ ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರಾಜು ಅವರನ್ನು ಗೆಲ್ಲಿಸಿ' ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಮುನಿರಾಜು ಮಾತನಾಡಿ, 'ನಾನು ಶಾಸಕನಾಗಿದ್ದಾಗ ಈ ಕ್ಷೇತ್ರದ ಅಭಿವೃದ್ಧಿಗಾಗಿ ನೂರಾರು ಕೋಟಿ ಅನುದಾನವನ್ನು ನೀಡಿದವರು ಯಡಿಯೂರಪ್ಪನವರು‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT