ದೇವನಹಳ್ಳಿ:  ‘ಮತದಾನದ ಹಕ್ಕು ಮತ್ತು ಕರ್ತವ್ಯದ ಕುರಿತು ಪ್ರತಿಯೊಬ್ಬರು ಜಾಗೃತರಾಗಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮುನಿರಾಜು ತಿಳಿಸಿದರು.
ದೇವನಹಳ್ಳಿ ನಳಂದ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ನಳಂದ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಮತಜಾಗೃತಿ ಅಭಿಯಾನ ದಲ್ಲಿ ಅವರು ಮಾತನಾಡಿದರು.

ಗ್ರಾಮಾಂತರ ಪ್ರೌಢಶಾಲೆ ಮುಖ್ಯಶಿಕ್ಷಕ ಬಿ.ಎನ್.ಕೃಷ್ಣಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ನಳಂದ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ವೆಂಕಟೇಶ್ ಗೌಡ, ಉಪನ್ಯಾಸಕ ಕೃಷ್ಣಮೂರ್ತಿ, ಶಿಕ್ಷಕ ಮಂಜುನಾಥ್, ಕೆ.ಎಂ.ಕೃಷ್ಣಮೂರ್ತಿ, ವೈ.ವಿ.ಚಂದ್ರಶೇಖರ್, ಮುನಿರಾಜು, ಹನುಮಂತಪ್ಪ, ಸಿ.ಆರ್.ಪಿ ನಾಗೇಶ್, ಮುನಿವೀರಪ್ಪ, ರವೀಂದ್ರ, ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ಕಾಲೇಜು ಆವರಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಮಾನವ ಸರಪಳಿ ನಿರ್ಮಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.