ಬೆಂಗಳೂರು/ಹುಬ್ಬಳ್ಳಿ: ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಭಾನುವಾರ ಬೆಳಿಗ್ಗೆಯಷ್ಟೇ ಪಕ್ಷಕ್ಕೆ ಸೇರಿಸಿಕೊಂಡಿದ್ದ ಬಿಜೆಪಿ, ಸಂಜೆ ವೇಳೆಗೆ ಆ ಪ್ರಕ್ರಿಯೆಯನ್ನೇ ರದ್ದು ಮಾಡಿದೆ.

ಪಕ್ಷದ ಕೇಂದ್ರ ನಾಯಕರ ಒಪ್ಪಿಗೆ ಪಡೆಯದೇ ರಾಜ್ಯ ಬಿಜೆಪಿ ಪ್ರಮುಖರು ಮುತಾಲಿಕ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಆದರೆ, ಮಂಗಳೂರಿನಲ್ಲಿ ಪಬ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪ್ರಕರಣ ಎದುರಿಸುತ್ತಿರುವ ಮುತಾಲಿಕ್ ಸೇರ್ಪಡೆಗೆ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ತೀವ್ರ ಮುಜುಗರಕ್ಕೆ ಒಳಗಾದ ಬಿಜೆಪಿ, ಸೇರ್ಪಡೆ ಪ್ರಕ್ರಿಯೆಯನ್ನೇ ರದ್ದು ಮಾಡಿದೆ.

ಮುತಾಲಿಕ್ ಲೋಕಸಭಾ ಚುನಾವಣೆ ಟಿಕೆಟ್ ನೀಡುವಂತೆ ಕೆಲ ದಿನಗಳ ಹಿಂದೆ ಬೇಡಿಕೆ ಇಟ್ಟಿದ್ದರು. ಆದರೆ, ಪಕ್ಷ ಅದನ್ನು ನಿರಾಕರಿಸಿತ್ತು. ಬಳಿಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಷಿ ವಿರುದ್ಧ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಪ್ರಕಟಿಸಿದ್ದರು. ಇತ್ತೀಚೆಗೆ ಬಿಜೆಪಿ ನಾಯಕರನ್ನು ಸಂಪರ್ಕಿಸಿ ಯಾವ ಷರತ್ತುಗಳಿಲ್ಲದೇ ಪಕ್ಷ ಸೇರುವ ಕೋರಿಕೆ ಮುಂದಿಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.

‘ಯಾವುದೇ ಸ್ಥಾನಮಾನ ನೀಡದೆ, ಸಾಮಾನ್ಯ ಕಾರ್ಯಕರ್ತರನ್ನಾಗಿ ಮುತಾಲಿಕ್ ಅವರನ್ನು ಸೇರಿಸಿಕೊಳ್ಳುತ್ತಿರುವುದರಿಂದ ಬಿಜೆಪಿ ಕೇಂದ್ರ ನಾಯಕರ ಒಪ್ಪಿಗೆ ಪಡೆದಿರಲಿಲ್ಲ. ಆದರೆ, ಮುತಾಲಿಕ್ ಅವರ ಸೇರ್ಪಡೆ ವಿಷಯ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಹೆಚ್ಚು ಚರ್ಚೆಗೆ ಗ್ರಾಸ ಒದಗಿಸಿತ್ತು.

ತಕ್ಷಣವೇ ಪ್ರಹ್ಲಾದ ಜೋಶಿ ಅವರನ್ನು ಸಂಪರ್ಕಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್ನಾಥ್ ಸಿಂಗ್ ಅವರು ಮುತಾಲಿಕ್ ಅವರ ಪಕ್ಷ ಸೇರ್ಪಡೆ ಪ್ರಕ್ರಿಯೆ ರದ್ದು ಮಾಡುವಂತೆ ನಿರ್ದೇಶನ ನೀಡಿದರು’ ಎಂದು ಬಿಜೆಪಿ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಘಟಕದ ಸಮ್ಮತಿ ಇಲ್ಲದೇ ಮುತಾಲಿಕ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ತೀರ್ಮಾನವನ್ನು ಕೈಗೊಂಡ ರಾಜ್ಯ ಘಟಕದ ಪ್ರಮುಖರ ನಡವಳಿಕೆ ಬಗ್ಗೆ ರಾಜ್ನಾಥ್ ಸಿಂಗ್ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ಸಾರ್ವಜನಿಕವಾಗಿ ಪಕ್ಷಕ್ಕೆ ಮುಜುಗರ ಆಗುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳಬಾರದು ಎಂದು ಜೋಷಿ ಅವರಿಗೆ ತಾಕೀತು ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಅವರೂ ರಾಜನಾಥಸಿಂಗ್ ಜತೆ ದೂರವಾಣಿ ಮೂಲಕ ಮಾತನಾಡಿ, ಮುತಾಲಿಕ್ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.

ದಿಢೀರ್ ಸೇರ್ಪಡೆ: ಮುತಾಲಿಕ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬೆಳಿಗ್ಗೆ ದಿಢೀರನೆ ನಡೆಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರು ಪಕ್ಷದ ಬಾವುಟ ನೀಡಿ ಮುತಾಲಿಕ್ ಅವರನ್ನು ಬಿಜೆಪಿಗೆ ಬರ ಮಾಡಿಕೊಂಡರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ, ಮುಖಂಡ ಕೆ.ಎಸ್.ಈಶ್ವರಪ್ಪ, ಶಾಸಕ ಗೋವಿಂದ ಕಾರಜೋಳ ಹಾಜರಿದ್ದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್, ಲೋಕಸಭಾ ಚುನಾವಣೆಯಲ್ಲಿ ಹಿಂದು ಮತ ವಿಭಜನೆ ತಡೆಯಲು, ದೇಶದ ಭದ್ರತೆಯ ದೃಷ್ಟಿಯಿಂದ ಹಾಗೂ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡಲು ಬಿಜೆಪಿ ಸೇರುತ್ತಿರುವುದಾಗಿ ಹೇಳಿದರು.
‘ನಿನ್ನೆಯವರೆಗೂ ಬಿಜೆಪಿ ಮುಖಂಡರನ್ನು ಭ್ರಷ್ಟರು, ಹಿಂದುತ್ವದ ವಿರೋಧಿಗಳು ಎನ್ನುತ್ತಿದ್ದೀರಲ್ಲಾ’ ಎಂಬ ಪ್ರಶ್ನೆಗೆ, ‘ಆಗಿನ ಸಂದರ್ಭದಲ್ಲಿ ಹೇಳಿದ್ದು ನಿಜ. ಈಗ ಯಾವುದೇ ಕಹಿ ಉಳಿದಿಲ್ಲ. ಆರ್ಎಸ್ಎಸ್ನ ಹಿರಿಯರ ಮಾತಿಗೆ ಕಟ್ಟುಬಿದ್ದು ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದೆ’ ಎಂದರು.

‘ನಾನೊಬ್ಬ ಸನ್ಯಾಸಿ. ಯಾವುದೇ ಸ್ಥಾನಮಾನದ ಆಕಾಂಕ್ಷೆ ಇಲ್ಲ. ಯಾವುದೇ ಷರತ್ತು ವಿಧಿಸದೇ ಬಿಜೆಪಿ ಸೇರ್ಪಡೆಯಾಗುತ್ತಿರುವೆ. ಧಾರವಾಡ ಸೇರಿದಂತೆ ರಾಜ್ಯದ ಆರು ಲೋಕಸಭಾ ಕ್ಷೇತ್ರಗಳಲ್ಲಿ ಶ್ರೀರಾಮಸೇನೆಯ ಬೆಂಬಲಿಗರು ಸ್ಪರ್ಧಿಸುವುದಿಲ್ಲ’ ಎಂದು ಹೇಳಿದರು.
‘ಬಿಜೆಪಿ ಸೇರಿದರೂ ಹಿಂದುತ್ವದ ತತ್ವ– ಸಿದ್ಧಾಂತಗಳಿಗೆ ತಿಲಾಂಜಲಿ ಇಡುವುದಿಲ್ಲ. ನನ್ನೊಂದಿಗೆ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಈಶ್ವರಗೌಡ ಪಾಟೀಲ ಸೇರಿದಂತೆ ಇತರೆ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇನ್ನು ಮುಂದೆ ಶ್ರೀರಾಮಸೇನೆ ಅಸ್ತಿತ್ವದಲ್ಲಿ ಇರುವುದಿಲ್ಲ. ಹಂತ ಹಂತವಾಗಿ ಸಂಘಟನೆಯನ್ನು ವಿಸರ್ಜಿಸಲಾಗುವುದು’ ಎಂದರು.

ಅಧಿಕೃತ ಮಾಹಿತಿ ನಂತರ ಪ್ರತಿಕ್ರಿಯೆ: ಮುತಾಲಿಕ್
ಹುಬ್ಬಳ್ಳಿ: ‘ನಾನು ಬಿಜೆಪಿ ಸೇರ್ಪಡೆಯಾಗಿರುವುದನ್ನು ರದ್ದುಗೊಳಿಸಿರುವ ಪಕ್ಷದ ಹೈಕಮಾಂಡ್ ನಿರ್ಧಾರ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ದೆಹಲಿಯ ವಿದ್ಯಮಾನಗಳು ಅಧಿಕೃತವಾಗಿ ನನಗೆ ತಲುಪಿದ ನಂತರ ಆ ಬಗ್ಗೆ ಪ್ರತಿಕ್ರಿಯಿಸುವುದಾಗಿ’ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ತಿಳಿಸಿದರು.

ಮುತಾಲಿಕ್ ಪಕ್ಷ ಸೇರ್ಪಡೆಯನ್ನು ಬಿಜೆಪಿ ಹೈಕಮಾಂಡ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ‘ಪ್ರಜಾವಾಣಿ’ ಅವರನ್ನು ಸಂಪರ್ಕಿಸಿದಾಗ ಮೇಲಿನಂತೆ ಪ್ರತಿಕ್ರಿಯಿಸಿದರು.

ಈಶ್ವರಪ್ಪ ಮಧ್ಯಸ್ಥಿಕೆ?
ಮುತಾಲಿಕ್ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಪ್ರಮುಖ ಪಾತ್ರ ವಹಿಸಿದರು ಎಂದು ಹೇಳಲಾಗಿದೆ. ಮುತಾಲಿಕ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಶ್ವರಪ್ಪ ಶಿವಮೊಗ್ಗದಿಂದ ಹೆಲಿಕಾಪ್ಟರ್ನಲ್ಲಿ ಬಂದಿದ್ದರು. ಮಾಧ್ಯಮದವರ ಪ್ರಶ್ನೆಗಳನ್ನು ಎದುರಿಸಲಾಗದೆ ಮುತಾಲಿಕ್ ಪತ್ರಿಕಾಗೋಷ್ಠಿಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಪ್ರಸಂಗವೂ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.