ಅಮರಾವತಿ: ಬಿಜೆಪಿ ವಿರೋಧಿ ಪಕ್ಷಗಳು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಧಾನಿ ಯಾರಾಗುವರು ಎಂಬ ಬಗ್ಗೆ ನರೇಂದ್ರ ಮೋದಿ ಅವರು ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ ಎಂದುಆಂಧ್ರ ಪ್ರದೇಶ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

‘ಪ್ರಧಾನಿ ಆಗುವವರು ಯಾರು’ ಮತ್ತು ಪ್ರಧಾನಿ ಹುದ್ದೆಗಾಗಿ ಕಿತ್ತಾಡಿ ವಿರೋಧ ಪಕ್ಷಗಳ ಮುಖಂಡರು ‘ಬಟ್ಟೆ ಹರಿದುಕೊಳ್ಳಲಿದ್ದಾರೆ’ ಎಂದು ಪ್ರಧಾನಿ ಮೋದಿ ಹೇಳಿದ್ದಕ್ಕೆ ನಾಯ್ಡು ಈ ರೀತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಪಕ್ಷದ ಪರವಾಗಿ ಪ್ರಚಾರ ಮಾಡುವಾಗ ಪ್ರಧಾನಿಯೊಬ್ಬರು ಇಷ್ಟು ಕೀಳು ಮಟ್ಟಕ್ಕೆ ಇಳಿದಿರುವುದು ನೋಡಿ ನೋವಾಗಿದೆ. ನಮ್ಮ ಪ್ರಧಾನಿ ಆಭ್ಯರ್ಥಿ ಯಾರು ಎಂದು ಮೋದಿ ಅವರು ಕೇಳುತ್ತಿದ್ದಾರೆ. ಆ ಬಗ್ಗೆ ನಮ್ಮಲ್ಲಿ ಸ್ಪಷ್ಟತೆ ಇದೆ. ನಾನು ಈ ಹುದ್ದೆಯ ಆಕಾಂಕ್ಷಿ ಅಲ್ಲ. ಆದರೆ, ಫಲಿತಾಂಶ ಪ್ರಕಟವಾದ ಬಳಿಕ ನಾವು ಸಭೆ ಸೇರಿ ಸರಿಯಾದ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದೇವೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.