ಬೆಂಗಳೂರು: ‘ಮಂಡ್ಯ, ಕೋಲಾರ ಹಾಗೂ ತುಮಕೂರಿನಲ್ಲಿ ಜೆಡಿಎಸ್–ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಸಂಪೂರ್ಣವಾಗಿ ಸಮನ್ವಯ ಸಾಧಿಸಲು ಸಾಧ್ಯವಾಗಿಲ್ಲ ಎಂಬ ಮಾಹಿತಿ ನಮಗೂ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಂಡ್ಯದಲ್ಲೂ ಮೊದಲೇ ಎಲ್ಲರನ್ನೂ ಕರೆಸಿ ಮಾತನಾಡಿದರೆ ಇನ್ನೂ ಚೆನ್ನಾಗಿ ಕೆಲಸ ಮಾಡಬಹುದಿತ್ತು ಎಂದು ಎಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಶೇ 80ರಷ್ಟು ಸರಿಯಾಗಿದೆ. ಆದರೆ, ಶೇ 20 ಸರಿಯಾಗಿಲ್ಲ. ಇದೂ ಆಗಿದ್ದರೆ ಒಟ್ಟು 24-25 ಸೀಟು ಗೆಲ್ಲಬಹುದಿತ್ತು’ ಎಂದರು.

‘ಕೆಲವು ಕಡೆ ಸಣ್ಣ ಪುಟ್ಟ ವ್ಯತ್ಯಾಸ ಆಗಿದೆ. ತುಮಕೂರು, ಕೋಲಾರ ಹಾಗೂ ಮಂಡ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗಿದ್ದು ನಿಜ. ಬೆಂಗಳೂರು ಉತ್ತರ, ಚಿತ್ರದುರ್ಗ, ಉತ್ತರ ಕರ್ನಾಟಕದ ಕ್ಷೇತ್ರಗಳಲ್ಲಿ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ಉಳಿದ ಕ್ಷೇತ್ರಗಳಲ್ಲಿ ಮೈತ್ರಿ ಯಶಸ್ವಿಯಾಗಿದೆ. ಬಿಜೆಪಿಗಿಂತ ನಾವೇ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ’ ಎಂದರು.

ತುಮಕೂರಿನಲ್ಲಿ ಮುದ್ದಹನುಮೇಗೌಡ ಹಾಗೂ ಕೆ.ಎನ್.ರಾಜಣ್ಣ ಬೆಂಬಲಿಗರು ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಪರ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಸ್ಥಳೀಯ ಕಾಂಗ್ರೆಸ್ ಮುಖಂಡರು ಪ್ರಚಾರ ಮಾಡಿಲ್ಲ ಎಂಬ ಚರ್ಚೆ ಉಭಯ ಪಕ್ಷದಲ್ಲಿ ಆರಂಭದಿಂದಲೂ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.