ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಅವರ ‘ಚೌಕೀದಾರ್‌’ ನೇರಪ್ರಸಾರ 31ರಂದು

Last Updated 29 ಮಾರ್ಚ್ 2019, 11:55 IST
ಅಕ್ಷರ ಗಾತ್ರ

ಬೆಳಗಾವಿ: ‘ಇದೇ ತಿಂಗಳ 31ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡಲಿರುವ ‘ಮೈ ಭೀ ಚೌಕೀದಾರ್‌ ಹ್ಞುಂ’ ಸಂವಾದ ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿನ ಅನಗೋಳದಲ್ಲಿರುವ ಸಿಟಿ ಹಾಲ್‌ನಲ್ಲಿ ಬೃಹತ್‌ ಎಲ್‌ಸಿಡಿ ಪರದೆ ಮೇಲೆ ಬಿತ್ತರಿಸಲಾಗುವುದು’ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವನ್ನು ದೇಶದ 500 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಂದೊಂದು ಸ್ಥಳದಲ್ಲಿ ನೇರಪ್ರಸಾರ ಮಾಡಲಾಗುವುದು. ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಡಿ ಅನಗೋಳದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಸ್ವಚ್ಛತಾ ಕರ್ಮಚಾರಿಗಳು, ಚೌಕೀದಾರರು, ಆಟೊ ಚಾಲಕರು ಸೇರಿದಂತೆ ಸಮಾಜದ ಎಲ್ಲ ಸ್ತರಗಳ ಜನರು ಇದರಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ರಾಜ್ಯ ಬಿಜೆಪಿ ಘಟಕದ ಸಹ ವಕ್ತಾರೆ ಮಾಳವಿಕಾ ಅವಿನಾಶ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

‘ಮಾಳವಿಕಾ ಅವರು ಇದೇ 30ರಂದು ಸಂಜೆ ವಡಗಾಂವ, ಖಾಸಬಾಗ್‌ದಲ್ಲಿ ರೋಡ್‌ಶೋ ನಡೆಸಲಿದ್ದಾರೆ. 31ರಂದು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್‌ಶೋ ನಡೆಲಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ. ಬಿ. ಝಿರಲಿ ಮಾತನಾಡಿ, ‘ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಕಣಕ್ಕಿಳಿದಿರುವ ಸುರೇಶ ಅಂಗಡಿ ಅವರು ಏ.4ರಂದು ಪುನಃ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ಗೋಪ್ಯತೆ ಉಲ್ಲಂಘನೆ:

‘ಆದಾಯ ತೆರಿಗೆ ಇಲಾಖೆಯು ಯಾರ ಕೈ ಕೆಳಗೆ ಕೆಲಸ ಮಾಡುವುದಿಲ್ಲ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದೆ. ತನ್ನದೇ ಆದ ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ದಾಳಿ ಮಾಡುತ್ತಾರೆ. ಐ.ಟಿ ದಾಳಿಯ ವಿಷಯವು ಅತ್ಯಂತ ಗೋಪ್ಯತೆಯಿಂದ ಕೂಡಿರುತ್ತದೆ. ಇಂತಹ ವಿಷಯವನ್ನು ಬಹಿರಂಗಪಡಿಸುವ ಮೂಲಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗೋಪ್ಯತೆಯ ವಚನವನ್ನು ಉಲ್ಲಂಘಿಸಿದ್ದಾರೆ. ಇವರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಕೂಡ ಐ.ಟಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಮಾತನಾಡಿದ್ದಾರೆ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಸಂವಿಧಾನಕ್ಕೆ ಅಗೌರವ ತರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಇವರ ವಿರುದ್ಧವೂ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT