ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆಗ್ರಹಿಸಿದರು.

ಆಲ್ ಇಂಡಿಯಾ ಮಜ್ಲಿಸ್ ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಜತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿರುವುದು ಹಳೆಯ ವಿದ್ಯಮಾನ. ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಇದನ್ನೇ ಮಾಡಿದ್ದಾರೆ. ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವುದು ಅವರ ಜಾಯಮಾನ ಎಂದು ಅವರು ಹರಿಹಾಯ್ದರು.

ಇದೇ 4ರಂದು ಬಂದ್ ನಡೆಸಲು ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ಪ್ರತಿಭಟನೆ ನಡೆಸುವುದಾದರೆ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಅವಕಾಶಕಲ್ಪಿಸಲಾಗುವುದು. ಸಚಿವರು, ಸಂಸದರ ಮನೆ ಮುಂದೆ ಪ್ರತಿಭಟನೆ ನಡೆಸುವ ಕ್ರಮ ಸರಿಯಲ್ಲ ಎಂದೂ ಅವರು ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.