ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ವರ್ಷ ಮುಂಚೆ ಗೃಹ ಖಾತೆ ಕೊಡಬೇಕಿತ್ತು: ರಾಮಲಿಂಗಾರೆಡ್ಡಿ

Last Updated 8 ಫೆಬ್ರುವರಿ 2018, 8:46 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಎರಡು ವರ್ಷ ಮುಂಚೆ ಗೃಹಸಚಿವನಾಗಿದ್ದರೆ ಭಯ ಹುಟ್ಟಿಸುವ ಫ್ಯಾಕ್ಟರಿಗಳನ್ನೆಲ್ಲಾ  ಮುಚ್ಚುತ್ತಿದ್ದೆ. ಈಗಲೂ ಈ ಕೆಲಸ ಮಾಡಲು ಪ್ರಯತ್ನಿಸುತ್ತಿದ್ದೇನೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ತಿನಲ್ಲಿ ಬುಧವಾರ ಹೇಳಿದರು.

ಅದಕ್ಕೆ, ವಿರೋಧ ಪಕ್ಷದ ನಾಯಕ ಕೆ. ಎಸ್‌.ಈಶ್ವರಪ್ಪ, ‘ಕೊನೆಗೂ ನೀವು ಈ ಹಿಂದಿನ ಗೃಹ ಸಚಿವರು ನಾಲಾಯಕ್‌ ಎಂದು ಒಪ್ಪಿಕೊಂಡಿರಿ’ ಎಂದು ವ್ಯಂಗ್ಯವಾಡಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಸದಸ್ಯರ ಆರೋಪಕ್ಕೆ ಸಚಿವರು ಉತ್ತರಿಸಿದರು.‘ಹಿಂದೂಗಳ ಹತ್ಯೆಯಲ್ಲಿ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕೈವಾಡ ಇದೆ. ಈ ಸಂಘಟನೆಯನ್ನು ನಿಷೇಧಿಸಬೇಕು ಎಂದು ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಎರಡೂ ಕೈ ಸೇರದೇ ಚಪ್ಪಾಳೆ ಆಗದು. 13 ಮುಸ್ಲಿಮರ ಹತ್ಯೆ ಪ್ರಕರಣಗಳಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್‌, ಹಿಂದೂ ಜಾಗರಣ ವೇದಿಕೆ ಭಾಗಿಯಾಗಿದೆ. ಈ  ಕೊಲೆಗಳು ಕೂಡಾ ತಪ್ಪೇ. ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸಿದರೆ, ಸಂಘಪರಿವಾರವನ್ನೂ ನಿಷೇಧಿಸಬೇಕಾಗುತ್ತದೆ’ ಎಂದರು.

‘ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಪಿಎಫ್‌ಐ ನಿಷೇಧ ಮಾಡಬಹುದಿತ್ತು. ಕಾಂಗ್ರೆಸ್‌ ಮತಗಳನ್ನು ಅವರು ವಿಭಜನೆ ಮಾಡುತ್ತಾರೆ ಎಂಬ ಕಾರಣಕ್ಕೆ ನಿಷೇಧಿಸಿಲ್ಲ’ ಎಂದು ರೆಡ್ಡಿ ತಿರುಗೇಟು ನೀಡಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT