ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಓಂಶಕ್ತಿ ಚಲಪತಿಯ ಎರಡು ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

Last Updated 24 ಏಪ್ರಿಲ್ 2018, 4:01 IST
ಅಕ್ಷರ ಗಾತ್ರ

ಕೋಲಾರ: ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಓಂಶಕ್ತಿ ಚಲಪತಿ ಅವರ ಎರಡು ಕಾರುಗಳಿಗೆ ದುಷ್ಕರ್ಮಿಗಳು ಮಂಗಳವಾರ ನಸುಕಿನಲ್ಲಿ ಬೆಂಕಿ ಹಚ್ಚಿದ್ದಾರೆ.

ಚಲಪತಿ ಕಠಾರಿಪಾಳ್ಯದಲ್ಲಿನ ತಮ್ಮ ಮನೆಯ ಮುಂದೆ ಕಾರು ನಿಲ್ಲಿಸಿದ್ದರು. ಬೆಳಗಿನ ಜಾವ 3ರ ಸುಮಾರಿಗೆ ಕಿಡಿಗೇಡಿಗಳು ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಎರಡೂ ಕಾರುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿರುವ ಚಲಪತಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆದರಿಸಲು ಈ ದುಷ್ಕೃತ್ಯ: ಆರೋಪ

ಚಲಪತಿ ಕುರುಬ ಸಮುದಾಯದವರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಲಿ ಶಾಸಕ ವರ್ತೂರು ಪ್ರಕಾಶ್ ಸಹ ಅದೇ ಸಮುದಾಯದವರು. ಹೀಗಾಗಿ ಕುರುಬ ಸಮುದಾಯದ ಮತಗಳು ವಿಭಜನೆಯಾಗುವುದನ್ನು ತಪ್ಪಿಸಲು ವರ್ತೂರು ಪ್ರಕಾಶ್ ಬೆಂಬಲಿಗರು ಓಂಶಕ್ತಿ ಚಲಪತಿ ಅವರ ಕಾರುಗಳಿಗೆ ಬೆಂಕಿ ಹಚ್ಚಿ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಬೆದರಿಸಲು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಓಂಶಕ್ತಿ ಚಲಪತಿ ಅವರ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್ ಘಟನೆ ಬಗ್ಗೆ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT